Publish Date: Mon, 19 Nov 2018 (12:48 IST)
Updated Date: Mon, 19 Nov 2018 (12:50 IST)
ಬೆಂಗಳೂರು : ಸಿಎಂ ಕುಮಾರಸ್ವಾಮಿ ರೈತ ಮಹಿಳೆ ಬಗ್ಗೆ ನೀಡಿರುವ ಹೇಳಿಕೆಯ ಬಗ್ಗೆ ಡಿಸಿಎಂ ಪರಮೇಶ್ವರ್ ಇದೀಗ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಮುಖ್ಯಮಂತ್ರಿಗಳು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಯಾರಿಗಾದರೂ ಸಿಎಂ ಹೇಳಿಕೆಯಿಂದ ಮನಸ್ಸಿಗೆ ನೋವು ಆಗಿದ್ದರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ನಮ್ಮದು ರೈತ ಪರ ಸರ್ಕಾರ, ಮಹಿಳೆಯರು, ರೈತರ ಪರವಾಗಿ ಸಾಕಷ್ಟು ಯೋಜನೆಗಳನ್ನು ನಾವು ಜಾರಿ ಮಾಡಿದ್ದೇವೆ. ರೈತ ವಿರೋಧಿ ನೀತಿಯನ್ನು ನಾವು ಅನುಸರಿಸಿಲ್ಲ ಎಂದು ಅವರು ಹೇಳಿದ್ದಾರೆ.
ಇನ್ನು ಬಿಜೆಪಿಯವರಿಗೆ ರೈತರ ಬಗ್ಗೆ ಮಾತನಾಡುವುದಕ್ಕೆ ನೈತಿಕ ಹಕ್ಕಿಲ್ಲ. ದೇಶದಲ್ಲಿ ಬಿಜೆಪಿ ಇರುವ ರಾಜ್ಯಗಳಲ್ಲಿ ರೈತರ ಪರಿಸ್ಥಿತಿ ಯಾವ ರೀತಿ ಎಂದು ಗೊತ್ತು. ಬಿಜೆಪಿಯವರು ಯಾರು ಕೂಡ ಸಿಎಂ ಆಗಲಿ ಸರ್ಕಾರದ ವಿರುದ್ಧವಾಗಲಿ ಮಾತನಾಡುವ ಹಕ್ಕಿಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.