Select Your Language

Notifications

webdunia
webdunia
webdunia
webdunia

ಪಿಂಚಣಿ ಯೋಜನೆಗಳಿಂದ ಕೈಬಿಟ್ಟವರ ಬಗ್ಗೆ ಡಿಸಿಎಂ ಜಿ ಪರಮೇಶ್ವರ್‌

DCM G Parameshwar
ಬೆಂಗಳೂರು: ರಾಜ್ಯದಲ್ಲಿನ ವಿವಿಧ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳ ಫಲಾನುಭವಿಗಳ ಪಟ್ಟಿಯಿಂದ 51,720 ಮಂದಿಯನ್ನು ಕೈಬಿಡಲಾಗಿದೆ ಎಂದು ಕಂದಾಯ ಖಾತೆಯನ್ನು ಹೊಂದಿರುವ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಸಮಾಜ ಕಲ್ಯಾಣ ಸಚಿವ ಕೆ.ಎಚ್. ​​ಮುನಿಯಪ್ಪ ಅವರ ಪುತ್ರಿ ಹಾಗೂ ಕೆಜಿಎಫ್ ಕ್ಷೇತ್ರದ ಕಾಂಗ್ರೆಸ್ ಶಾಸಕಿ ರೂಪಕಲಾ ಎಂ. ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸುವಾಗ, ಪರಮೇಶ್ವರ್ ಅವರು ಈ ಸೌಲಭ್ಯಗಳನ್ನು ಪಡೆಯಲು ಇರುವ ಅರ್ಹತಾ ಮಾನದಂಡಗಳನ್ನು ವಿವರಿಸಿದರು.

ಸಾಮಾಜಿಕ ಭದ್ರತಾ ಪಿಂಚಣಿ ಪಡೆಯಲು ಗ್ರಾಮೀಣ ಪ್ರದೇಶಗಳಿಗೆ ವಾರ್ಷಿಕ ಆದಾಯದ ಮಿತಿಯನ್ನು 12,000 ರೂಪಾಯಿ ಹಾಗೂ ನಗರ ಪ್ರದೇಶಗಳಿಗೆ 17,000 ರೂಪಾಯಿ ಎಂದು ನಿಗದಿಪಡಿಸಲಾಗಿದೆ ಎಂದು ಅವರು ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ವಾಕ್ ಸ್ವಾತಂತ್ರ್ಯದ ಮೇಲೆ ಮೋದಿ ಸರ್ಕಾರ ದಾಳಿ: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ