ರಾಜ್ಯದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳರ ಪುತ್ರ ಗೋಪಾಲ ಕಾರಜೋಳರನ್ನು ಚೆನ್ನೈ ಆಸ್ಪತ್ರೆಗೆ ಏರಲಿಫ್ಟ್ ಮಾಡಲಾಗಿದೆ.
ಕೊರೊನಾ ವೈರಸ್ ಪಾಸಿಟಿವ್ ಕಾಣಿಸಿಕೊಂಡಿದ್ದರಿಂದಾಗಿ ಗೋಪಾಲ್ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ವೆಂಟಿಲೇಟರ್ ಬಳಸಿ ಚಿಕಿತ್ಸೆ ನೀಡುತ್ತಿದ್ದರೂ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿಲ್ಲ ಎನ್ನಲಾಗಿದೆ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಗೋವಿಂದ ಕಾರಜೋಳ ಕುಟುಂಬದಲ್ಲಿ 8 ಜನರಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದೆ.