Publish Date: Tue, 06 Jul 2021 (10:20 IST)
Updated Date: Tue, 06 Jul 2021 (10:22 IST)
ಬೆಂಗಳೂರು: ಡಿಸಿಎಂ ಲಕ್ಷ್ಮಣ್ ಸವದಿ ಪುತ್ರ ಚಿದಾನಂದ ಪ್ರಯಾಣಿಸುತ್ತಿದ್ದ ಕಾರು ಬೈಕ್ ಗೆ ಡಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ನಿನ್ನೆ ಸಂಜೆ ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮ ಕ್ರಾಸ್ ಬಳಿ ನಡೆದಿದೆ.
ಘಟನೆ ನಡೆದ ತಕ್ಷಣ ಗಾಬರಿಗೊಂಡ ಚಿದಾನಂದ ತಂದೆಗೆ ಕರೆ ಮಾಡಿದ್ದು, ಲಕ್ಷ್ಮಣ್ ಸವದಿ ತಕ್ಷಣವೇ ಬಾಗಲಕೋಟೆ ಎಸ್ ಪಿಗೆ ಕರೆ ಮಾಡಿದ್ದಾರೆ ಎನ್ನಲಾಗಿದೆ.
ಅಪಘಾತವಾದ ತಕ್ಷಣ ಸವದಿ ಪುತ್ರ ಮತ್ತು ಸಂಗಡಿಗರು ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾರೆ ಎನ್ನುವುದು ಸ್ಥಳೀಯರ ಆರೋಪವಾಗಿದೆ. ಆದರೆ ಚಿದಾನಂದ ಸವದಿ ಖಾಸಗಿ ಮಾಧ‍್ಯಮಕ್ಕೆ ಹೇಳಿಕೆ ಕೊಟ್ಟಿದ್ದು, ತಪ್ಪಿಸಿಕೊಳ್ಳಲು ಯತ್ನಿಸಿಲ್ಲ. ಘಟನೆ ಬಗ್ಗೆ ನೋವಾಗಿದೆ. ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಯಾರಿಗೂ ಧಮ್ಕಿ ಹಾಕಿಲ್ಲ. ಆಕಸ್ಮಿಕವಾಗಿ ಈ ಅಪಘಾತ ನಡೆದಿದೆ ಎಂದಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಮೃತರ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.