ಸಿಎಂ ಸ್ಥಾನದ ಮೇಲೆ ಡಿಸಿಎಂ ಲಕ್ಷ್ಮಣ ಸವದಿ ಕಣ್ಣು

Webdunia
ಶನಿವಾರ, 19 ಅಕ್ಟೋಬರ್ 2019 (15:18 IST)
ಮಹಾರಾಷ್ಟ್ರ ಚುನಾವಣೆ ಬಗ್ಗೆ ಭವಿಷ್ಯ ನುಡಿದಿರೋ ಡಿಸಿಎಮ್ ಲಕ್ಷ್ಮಣ ಸವದಿ, ರಾಜ್ಯದ ಸಿಎಂ ಸ್ಥಾನದ ಬಗ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ.

ಮಹಾರಾಷ್ಟ್ರದಲ್ಲಿ 200 ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದ್ದೇವೆ. ಮಹಾರಾಷ್ಟ್ರ ಸಿ ಎಮ್ ದೇವೇಂದ್ರ ಫಡ್ನವೀಸ್ ಉತ್ತಮ ಆಡಳಿತ ಕೊಟ್ಟಿದ್ದಾರೆ.

ಚುನಾವಣೆಯ ಫಲಿತಾಂಶದ ದಿನ ಕೇಸರಿ ಧ್ವಜ ಹಾರಿಸುವದು ಖಚಿತ ಅಂತ ಲಕ್ಷ್ಮಣ ಸವದಿ ಹೇಳಿದ್ದಾರೆ.  
ಹುಕ್ಕೇರಿ ಶಾಸಕ ಉಮೇಶ್ ಕತ್ತಿ ಪ್ರತ್ಯೇಕ ಉತ್ತರ ಕರ್ನಾಟಕ ಸಿ ಎಮ್ ಹೇಳಿಕೆಗೆ ಪ್ರತಿಕ್ರಿಯಿಸಿದ್ದು, ಅವರು ಒಳಗೊಂದು ಹೊರಗೊಂದು ಮಾತನಾಡುವವರಲ್ಲ.

ಹಾಸ್ಯಭರಿತ ಮಾತುಗಳನ್ನು ಆಡುತ್ತಾರೆ. ಅದನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯ ಇಲ್ಲ ಎಂದ್ರು.
ಎಲ್ಲರಿಗೂ ಆಸೆ ಇರುತ್ತದೆ. ಯಾರೂ ರಾಜಕೀಯ ಸನ್ಯಾಸಿಗಳಲ್ಲ.  ಶಾಸಕರಾದವರು ಸಚಿವರು, ಸಚಿವರಾದವರು  ಡಿಸಿಎಮ್ ಮತ್ತು ಡಿಸಿಎಮ್ ಆದವರು ಮುಖ್ಯಮಂತ್ರಿ ಆಗಬೇಕು ಅನ್ನುವ ಆಸೆ ಇರುತ್ತದೆ. ಅವರಿಗೂ ಮುಂದೆ ಅವಕಾಶ ಸಿಗಬಹುದು. ಅವರೆಲ್ಲ ತಮಾಷೆಯಾಗಿ ಮಾತನಾಡುತ್ತಾರೆ.

ನನಗೆ ಯಡಿಯೂರಪ್ಪ ಅವರ ನಾಯಕತ್ವದ ಸ್ಥಾನ ವಹಿಸುವ ಅಥವಾ ಸಿ ಎಮ್ ಆಗುವ ಆಸೆ ಇಲ್ಲ. ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಹೈಕಮಾಂಡ್ ಕೊಡುವ ಜವಾಬ್ದಾರಿ ನಿಭಾಯಿಸುತ್ತೇನೆ ಎಂದಿದ್ದಾರೆ ಲಕ್ಷ್ಮಣ ಸವದಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಸಚಿವ ಮಧು ಬಂಗಾರಪ್ಪ ಸ್ಫೋಟಕ ಹೇಳಿಕೆ

ಮೊಬೈಲ್ ವಾಲ್ಯೂಮ್ ಕಡಿಮೆ ಮಾಡಿ ಎಂದಿದ್ದಕ್ಕೆ ಮಹಿಳೆಯಿಂದ ಪೆಪ್ಪರ್ ಸ್ಪ್ರೇ, Video

ಮುಂದಿನ ಸುದ್ದಿ
Show comments