Select Your Language

Notifications

webdunia
webdunia
webdunia
Monday, 21 April 2025
webdunia

ಮಹೇಶ್ ಕುಮುಟಳ್ಳಿಯನ್ನು ದರಿದ್ರ ಎಂದು ನಿಂದಿಸಿದ ಡಿಸಿಎಂ ಲಕ್ಷ್ಮಣ ಸವದಿ

ಬೆಳಗಾವಿ
ಬೆಳಗಾವಿ , ಶುಕ್ರವಾರ, 27 ಸೆಪ್ಟಂಬರ್ 2019 (12:51 IST)
ಬೆಳಗಾವಿ : ಸಮ್ಮಿಶ್ರ ಸರ್ಕಾರ ಉರುಳಿಸಿ ಬಿಜೆಪಿ ಸರ್ಕಾರದ ರಚನೆಗೆ ಕಾರಣರಾದ ಮಹೇಶ್ ಕುಮುಟಳ್ಳಿ ಅವರನ್ನು ಡಿಸಿಎಂ ಲಕ್ಷ್ಮಣ ಸವದಿ ನಿಂದಿಸಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.




ಕೃಷ್ಣಾ ನದಿ ಪ್ರವಾಹ ಪೀಡಿತ ಗ್ರಾಮಕ್ಕೆ ಲಕ್ಷ್ಮಣ ಸವದಿ ಭೇಟಿ ನೀಡಿದ್ದರು. ಈ ವೇಳೆ ಮೊಬೈಲ್‍ ನಲ್ಲಿ ಮಾತನಾಡುತ್ತಾ ಡಿಸಿಎಂ ಸವದಿ, ಮುಂಜಾನೆ ಕುಮಟಳ್ಳಿ ಅಂತಹ ದರಿದ್ರ ಮಕ್ಕಳ ಹೆಸರು ನೆನಪಿಸಬೆಡಿ. ಅವನ ಸುದ್ದಿ ತಗೊಂಡ್ ನಾನೇನು ಮಾಡಲಿ. ನನ್ನ ಮೂಡ್ ಹಾಳು ಮಾಡಬೇಡಿ ಎಂದಿದ್ದಾರೆ.


ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಿಜೆಪಿ ಸರ್ಕಾರದ ಆಸ್ತಿತ್ವಕ್ಕೆ ಕಾರಣರಾದ ಮಹೇಶ್ ಕುಮುಟಳ್ಳಿ ನಿಂದಿಸಿರುವುದಕ್ಕೆ ಡಿಸಿಎಂ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷರಿಗೆ ಪತ್ರದ ಮೂಲಕ ಖಡಕ್ ಎಚ್ಚರಿಕೆ ಕೊಟ್ಟ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷ