Daily Horoscope

Select Your Language

Notifications

webdunia
webdunia
webdunia
webdunia

ಜಲಾಶಯದ ನೀರನ್ನು ಅದಕ್ಕೆ ಮಾತ್ರ ಬಳಸಿ ಎಂದ ಡಿಸಿಎಂ

ಗೋವಿಂದ ಕಾರಜೋಳ
ಜಲಾಶಯದಿಂದ ಬರುವ ನೀರನ್ನು ಬಳಸಿ ಎಂದು ಡಿಸಿಎಂ ಹೇಳಿದ್ದಾರೆ.

ವಿಜಯಪುರ ಜಿಲ್ಲೆಯ ಆಲಮಟ್ಟಿಯ  ಜಲಾಶಯದಿಂದ ಏತನೀರಾವರಿ ಹಂತ 3 ರಡಿ ಬರುವ ಮುಳವಾಡ ಮತ್ತು ಚಿಮ್ಮಲಗಿ ಏತ ನೀರಾವರಿ ಯೋಜನೆಯ ಜಾಲದಡಿ ಬರುವ ಕೆರೆಗಳನ್ನು ತುಂಬಿಸಲು 2 ಟಿಎಂಸಿ ನೀರನ್ನು ಹರಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಮುಳವಾಡ ಏತ ನೀರಾವರಿ ಜಾಲದಡಿ 70 ಕೆರೆಗಳು ಹಾಗೂ ಚಿಮ್ಮಲಗಿ ಏತನೀರಾವರಿ ಯೋಜನೆಯ ಜಾಲದಡಿ 29 ಕೆರೆಗಳನ್ನು ತುಂಬಿಸಲು ನೀರು ಹರಿಸಲಾಗುವುದು. 3 ನೇ ಹಂತದ ವ್ಯಾಪ್ತಿಯಲ್ಲಿ ಬರುವ ತಾಲ್ಲೂಕುಗಳಾದ ಬಸವನ ಬಾಗೇವಾಡಿ, ಮುದ್ದೇಬಿಹಾಳ, ದೇವರ ಹಿಪ್ಪರಗಿ ಮತ್ತು ವಿಜಯಪುರ ತಾಲೂಕುಗಳ ಹಲವು ಕೆರೆಗಳಿಗೆ ನೀರು ತುಂಬಿಸಲಾಗುವುದು.

ಈಗ ಹರಿಸುವ ನೀರನ್ನು ಕೇವಲ ಬೇಸಿಗೆ ಕಾಲದಲ್ಲಿ ಜನ ಜಾನುವಾರುಗಳಿಗೆ ಪ್ರಾಣಿ ಪಕ್ಷಿಗಳಿಗೆ ಕುಡಿಯುವ ನೀರಿಗಾಗಿ ಉಪಯೋಗಿಸಬೇಕು. ಈ ಯೋಜನೆಯಡಿ ಬರುವ ಎಲ್ಲಾ ಸಾರ್ವಜನಿಕರು, ರೈತಾಪಿ ವರ್ಗದವರು ನೀರನ್ನು ಮಿತವಾಗಿ ಬಳಸಿಕೊಳ್ಳಬೇಕು. ಬೇಸಿಗೆ ಇನ್ನೂ 2 ತಿಂಗಳು ಇರುವ ಹಿನ್ನೆಲೆಯಲ್ಲಿ ಈ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಾತ್ರ ಮಿತವಾಗಿ ಬಳಸಬೇಕು ಎಂದು ಗೋವಿಂದ ಕಾರಜೋಳ ತಿಳಿಸಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಕ್ವಾರಂಟೈನ್ ಸೆಂಟರ್ ಗಳಾದ ವಿಶ್ವವಿದ್ಯಾಲಯಗಳು