Publish Date: Thu, 21 Feb 2019 (08:20 IST)
Updated Date: Thu, 21 Feb 2019 (08:22 IST)
ಬೆಂಗಳೂರು : ಕಂಪ್ಲಿ ಶಾಸಕ ಗಣೇಶ್ ಹಾಗೂ ಆನಂದ್ ಸಿಂಗ್ ಅವರ ನಡುವೆ ರಾಜಿ ಸಂಧಾನದ ಬಗ್ಗೆ ಕೆಪಿಸಿಸಿ ಮಾಜಿ ಅಧ್ಯಕ್ಷನಾದ ನನ್ನ ಬಳಿ ಏನ್ ಕೇಳ್ತೀರಾ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಮಾಧ್ಯಮದವರನ್ನು ಪ್ರಶ್ನಿಸಿದ್ದಾರೆ.
ಶಾಸಕ ಆನಂದ್ ಸಿಂಗ್ ಅವರ ಮೇಲೆ ಹಲ್ಲೆ ನಡೆಸಿ ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದ ಕಂಪ್ಲಿ ಶಾಸಕ ಗಣೇಶ್ ಅವರು ಬರೋಬ್ಬರಿ ಒಂದು ತಿಂಗಳ ನಂತರ ಕೊನೆಗೂ ಗುಜರಾತಿನಲ್ಲಿ ಸಿಕ್ಕಿಬಿದ್ದಿದ್ದಾರೆ.
ಈ ವಿಚಾರವಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ‘ಶಾಸಕರನ್ನು ಬಂಧಿಸಿದ್ದಾರೆ ಎನ್ನುವ ಮಾಹಿತಿ ಗೊತ್ತಾಗಿದೆ. ಆದರೆ ಪಕ್ಷ ಏನು ಕೈಗೊಳ್ಳುತ್ತೆ ಎನ್ನುವುದು ನನಗೆ ಗೊತ್ತಿಲ್ಲ. ನಾನು ಮಾಜಿ ಕೆಪಿಸಿಸಿ ಅಧ್ಯಕ್ಷ ಹಾಗೂ ಮಾಜಿ ಗೃಹ ಸಚಿವ. ಹೀಗಾಗಿ ನೀವು ಕೆಪಿಸಿಸಿ ಹಾಲಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಗೃಹ ಸಚಿವ ಎಂ.ಬಿ.ಪಾಟೀಲ್ ಅವರನ್ನೇ ಕೇಳಬೇಕು’ ಎಂದು ಹೇಳಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.