Publish Date: Mon, 30 Jul 2018 (10:24 IST)
Updated Date: Mon, 30 Jul 2018 (10:26 IST)
ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರ ನೇಮಕಕ್ಕೆ ಇನ್ನು ಹೆಚ್ಚು ತಡಮಾಡಲ್ಲ. 2-3 ದಿನಗಳಲ್ಲೇ ನೇಮಕವಾದ್ರೂ ಅಚ್ಚರಿಯಿಲ್ಲ ಎಂದು ಡಿಸಿಎಂ ಜಿ ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಪರಮೇಶ್ವರ್ ಎಲ್ಲಾ ಜಿಲ್ಲೆಗಳಿಗೂ ಉಸ್ತುವಾರಿ ಸಚಿವರ ನೇಮಕ ಮಾಡಲಾಗುವುದು. ಈ ಬಗ್ಗೆ ಸಿಎಂ ಕುಮಾರಸ್ವಾಮಿ ಕೂಡಾ ಮಾತನಾಡಿದ್ದಾರೆ. ಆಗಸ್ಟ್ 15 ರವರೆಗೆ ಉಸ್ತುವಾರಿ ಸಚಿವರ ನೇಮಕ ಮಾಡಲು ಕಾಯುವುದಿಲ್ಲ. ಆದಷ್ಟು ಬೇಗ ನೇಮಕ ನಡೆಯಲಿದೆ ಎಂದು ಅವರು ಹೇಳಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರ ನೇಮಕವಾಗದ ಕಾರಣ ಕೆಲವು ಜಿಲ್ಲೆಗಳಲ್ಲಿ ಅಭಿವೃದ್ಧಿ ಕೆಲಸಗಳು ಕುಂಠಿತವಾಗುತ್ತಿದೆ ಎಂಬ ಆರೋಪಗಳ ಹಿನ್ನಲೆಯಲ್ಲಿ ಸರ್ಕಾರ ಆದಷ್ಟು ಬೇಗ ಉಸ್ತುವಾರಿ ಸಚಿವರ ನೇಮಕಕ್ಕೆ ಮುಂದಾಗಿದೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.