Publish Date: Mon, 22 Oct 2018 (09:46 IST)
Updated Date: Mon, 22 Oct 2018 (09:47 IST)
ಬೆಳಗಾವಿ: ರಮೇಶ್ ಜಾರಕಿಹೊಳಿ ಹಾಗೂ ಸಚಿವ ಡಿಕೆ ಶಿವಕುಮಾರ್ ಇಬ್ಬರೂ ಸ್ನೇಹಿತರು. ಅವರಿಬ್ಬರೂ ಪರಸ್ಪರ ಮಾತನಾಡಿದರೆ ತಪ್ಪೇನು ಎಂದು ಡಿಸಿಎಂ ಪರಮೇಶ್ವರ್ ಮಾಧ್ಯಮಗಳಿಗೆ ಪ್ರಶ್ನಿಸಿದ್ದಾರೆ.
ಬಳ್ಳಾರಿ ಕಾಂಗ್ರೆಸ್ ನಲ್ಲಿ ಡಿಕೆಶಿ ಹಸ್ತಕ್ಷೇಪ ಕುರಿತು ಜಾರಕಿಹೊಳಿ ಸಹೋದರರ ಅಸಮಾಧಾನದ ಬೆನ್ನಲ್ಲೇ ಡಿಸಿಎಂ ಪರಮೇಶ್ವರ್ ಈ ರೀತಿ ಹೇಳಿಕೆ ನೀಡಿದ್ದಾರೆ. ಇಬ್ಬರೂ ಮಾತನಾಡಿದರೆ ತಪ್ಪೇನು? ಇಬ್ಬರಿಗೂ ಬಹಿರಂಗವಾಗಿ ಹೇಳಿಕೆ ನೀಡದಂತೆ ಸೂಚಿಸುತ್ತೇನೆ ಎಂದಿದ್ದಾರೆ.
ಈ ನಡುವೆ ಈ ಬಾರಿ ಲೋಕಸಭೆ ಉಪಚುನಾವಣೆಯಲ್ಲಿ ನಮ್ಮ ಪಕ್ಷದ ಗೆಲುವು ನಿಶ್ಚಿತ. ಮುಂದಿನ ಲೋಕಸಭೆ ಚುನಾವಣೆಯಲ್ಲೂ ಗೆಲುವು ಸಾಧಿಸಿ ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಹೆಚ್ಚಿನ ಬಲ ನೀಡಲಿದೆ. ಬಿಜೆಪಿ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರಬಾರದು ಎಂದು ಪರಮೇಶ್ವರ್ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.