Publish Date: Wed, 01 Aug 2018 (11:39 IST)
Updated Date: Wed, 01 Aug 2018 (11:41 IST)
ಬೆಂಗಳೂರು: ಶೀಘ್ರದಲ್ಲೇ ಜಿಲ್ಲಾ ಉಸ್ತುವಾರಿ ಸಚಿವರ ನೇಮಕವಾಗುತ್ತದೆ ಎಂದು ಡಿಸಿಎಂ ಪರಮೇಶ್ವರ್ ಹೇಳಿದ ಬೆನ್ನಲ್ಲೇ ಖಾತೆ ಹಂಚಿಕೆ ವಿಚಾರವಾಗಿ ಜೆಡಿಎಸ್, ಕಾಂಗ್ರೆಸ್ ಶಾಸಕರ ನಡುವೆ ಅಸಮಾಧಾನ ಶುರುವಾಗಿದೆಯೇ?
ಈ ಬಗ್ಗೆ ಬಂದ ವದಂತಿಗಳಿಗೆ ಡಿಸಿಎಂ ಪರಮೇಶ್ವರ್ ಸ್ಪಷ್ಟನೆ ಕೊಟ್ಟಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಉಸ್ತುವಾರಿ ಖಾತೆ ಹಂಚಿಕೆ ಕುರಿತು ಯಾವುದೇ ಅಸಮಾಧಾನವಿಲ್ಲ. ಏನೇ ಅಸಮಾಧಾನಗಳಿದ್ದರೂ ಸಿಎಂ ಜತೆ ಕೂತು ಚರ್ಚಿಸುತ್ತೇವೆ ಎಂದಿದ್ದಾರೆ.
ಇನ್ನೊಂದೆಡೆ ಖಾತೆ ಹಂಚಿಕೆ ಕುರಿತು ಅಸಮಾಧಾನಗೊಂಡಿರುವ ಕಾರಣಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಆಪ್ತರಿಗೆ ಭೋಜನಕೂಟಕ್ಕೆ ಆಹ್ವಾನಿಸಿ ಮಾತುಕತೆ ನಡೆಸುತ್ತಿದ್ದಾರೆ ಎಂಬ ಸುದ್ದಿಗಳಿಗೂ ಪರಮೇಶ್ವರ್ ಸ್ಪಷ್ಟನೆ ಕೊಟ್ಟಿದ್ದಾರೆ.
ಸಿದ್ದರಾಮಯ್ಯ ಭೋಜನಕೂಟಕ್ಕೆ ಆಹ್ವಾನಿಸಿದರೆ ತಪ್ಪೇನು? ನಾವೆಲ್ಲಾ ಒಟ್ಟಿಗೆ ಕುಳಿತು ಊಟ ಮಾಡುತ್ತೇವೆ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.