Publish Date: Sun, 01 Jul 2018 (11:54 IST)
Updated Date: Sun, 01 Jul 2018 (11:56 IST)
ಬೆಂಗಳೂರು: ಇಂದು ಸಮನ್ವಯ ಸಮಿತಿ ಸಭೆ ನಡೆಯಲಿರುವ ಹಿನ್ನಲೆಯಲ್ಲಿ ಡಿಸಿಎಂ ಡಾ ಜಿ ಪರಮೇಶ್ವರ್ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.
ಸಮನ್ವಯ ಸಮಿತಿಯಲ್ಲಿ ತೀರ್ಮಾನವಾದಂತೆ ಕಾಂಗ್ರೆಸ್ ಗೆ 30 ಸ್ಥಾನಗಳ ಹಂಚಿಕೆಯಾಗಬೇಕು. ಈ ಸ್ಥಾನಗಳ ಹಂಚಿಕೆ ಕುರಿತಂತೆ ವೇಣುಗೋಪಾಲ್ ಜತೆ ಡಿಸಿಎಂ ಚರ್ಚಿಸಲಿದ್ದಾರೆ ಎನ್ನಲಾಗಿದೆ.
ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ, ಸಚಿವ ಸ್ಥಾನಗಳ ಕುರಿತಂತೆ ವೇಣುಗೋಪಾಲ್ ಜತೆ ಚರ್ಚಿಸಿ ಮುಂದೆ ಕೈಗೊಳ್ಳಬೇಕಾದ ತೀರ್ಮಾನಗಳ ಕುರಿತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಪರಮೇಶ್ವರ್ ಚಿಂತನೆ ನಡೆಸಲಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.