Publish Date: Fri, 14 Sep 2018 (20:47 IST)
Updated Date: Fri, 14 Sep 2018 (20:52 IST)
ಪಕ್ಷದಲ್ಲಿ ಭಿನ್ನಾಭಿಪ್ರಾಯ ಹಾಗೂ ಅಸಮಧಾನಗಳು ಏಳೋದು ಸಹಜ. ಆದರೆ ಅವುಗಳನ್ನು ಮಾತುಕತೆ ಮೂಲಕ ಪರಿಹರಿಸುತ್ತೇವೆ. ಹೀಗಂತ ಡಿಸಿಎಂ ಹೇಳಿದ್ದಾರೆ.
ಸಚಿವ ರಮೇಶ ಜಾರಕಿಹೊಳಿ ಅವರ ಸಮಸ್ಯೆ ಬಹಳ ಗಂಭೀರವಾದದ್ದು ಏನೂ ಅಲ್ಲ. ಅವರ ಜತೆ ಚರ್ಚಿಸಿ ಮಾತುಕತೆ ಮೂಲಕ ಸಮಸ್ಯೆ ಪರಿಹರಿಸಲಾಗುತ್ತದೆ. ಹೀಗಂತ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.
ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ರಮೇಶ ಜಾರಕಿಹೊಳಿ ಅವರು ನಮ್ಮ ಜತೆ ಮಾತನಾಡಿದ್ದಾರೆ. ಅದನ್ನು ಶೀಘ್ರವೇ ಪರಿಹರಿಸಲಾಗುತ್ತದೆ. ರಾಜ್ಯದ ಸಮ್ಮಿಶ್ರ ಸರಕಾರ ಪತನ ಆಗುತ್ತದೆ ಎನ್ನುವುದು ಕೇವಲ ಭ್ರಮೆ ಎಂದು ಹೇಳಿದರು.