Publish Date: Wed, 26 Sep 2018 (18:35 IST)
Updated Date: Wed, 26 Sep 2018 (18:37 IST)
ತಮ್ಮ ವಿರುದ್ಧ ಯಾವ ಕಾಂಗ್ರೆಸ್ ಶಾಸಕರೂ ಅಸಮಧಾನ ಹೊಂದಿಲ್ಲ ಎಂದು ಉಪಮುಖ್ಯಮಂತ್ರಿ ಹೇಳಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ತಮ್ಮ ವಿರುದ್ಧ ಅಸಮಧಾನ ಹೊರಹಾಕಿಲ್ಲ. ಯಾವ ಶಾಸಕರೂ ಆಕ್ರೋಶ ವ್ಯಕ್ತಪಡಿಸಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.
ತಮ್ಮ ವಿರುದ್ಧ ಶಾಸಕರು ಅಸಮಧಾನಗೊಂಡಿದ್ದಾರೆ ಎಂಬ ವರದಿಗಳನ್ನು ನಿರಾಕರಿಸಿದ ಅವರು, ಇದೆಲ್ಲಾ ಮಾಧ್ಯಮಗಳ ಸೃಷ್ಟಿಯಾಗಿದೆ ಎಂದಿದ್ದಾರೆ.
ಬೆಂಗಳೂರಿನ ವಸಂತನಗರದಲ್ಲಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಕಂಚಿನ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಅವರು, ಶಾಸಕಾಂಗ ಪಕ್ಷದ ಸಭೆಯಲ್ಲಿ ಸರಕಾರದ ಮಟ್ಟದಲ್ಲಿ ಕೆಲಸ ಆಗದಿದ್ದಾಗ ತಮ್ಮ ಗಮನಕ್ಕೆ ತಂದರೆ ತಾನೇ ನಿಂತು ಮಾಡಿಸಿಕೊಡುವುದಾಗಿ ಹೇಳಿದ್ದಾಗಿ ತಿಳಿಸಿದರು.
ಶಾಸಕರು ಯಾರ ವಿರುದ್ಧವೂ ಸಭೆಯಲ್ಲಿ ಮಾತನಾಡಿಲ್ಲ ಎಂದು ಡಿಸಿಎಂ ಹೇಳಿದರು.