Webdunia - Bharat's app for daily news and videos

Install App

ನೇಣು ಬಿಗಿದ ಸ್ಥಿತಿಯಲ್ಲಿ ಪತ್ರಕರ್ತೆಯ ಮೃತ ದೇಹ ಪತ್ತೆ

Webdunia
ಗುರುವಾರ, 24 ಮಾರ್ಚ್ 2022 (21:32 IST)
ರಾಯಿಟರ್ಸ್ ಪತ್ರಿಕಾ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತೆ ಶ್ರುತಿ (35) ದೇಹವು ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪತಿ ಅನೀಶ್ ಕೊಯಾಡನ್ ಕೊಲೆ ಮಾಡಿರುವುದಾಗಿ ಶ್ರುತಿ ಕುಟುಂಬಸ್ಥರು ಆರೋಪಿಸಿ ದೂರು ನೀಡಿದ್ದು ಇದೀಗ ವೈಟ್‌ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 
2017ರಲ್ಲಿ ಶ್ರುತಿ ಹಾಗೂ ಅನೀಶ್ ವಿವಾಹವಾಗಿತ್ತು. ದಂಪತಿಗಳು ಮದುವೆಯ ನಂತರ ರಾಜಧನಿಯ ಹೊರವಕಲೆಯ ವೈಟ್‌ಫೀಲ್ಡ್‌ನ ನಲ್ಲೂರುಹಳ್ಳಿ ರಸ್ತೆ ಬಳಿಯ  ವಸತಿ ಸಮುಚ್ಚಯದ ಫ್ಲ್ಯಾಟ್‌ನಲ್ಲಿ ವಾಸವಾಗಿದ್ದರು. ಖಾಸಗಿ ಕಂಪನಿ ಉದ್ಯೋಗಿಯಾಗಿರುವ ಅನೀಶ್, ಪ್ರತಿನಿತ್ಯ ಶ್ರುತಿಗೆ ಚಿತ್ರಹಿಂಸೆ ನೀಡುತ್ತಿದ್ದ. ಸಂಬಳದ ಹಣವನ್ನು ತವರು ಮನೆಗೆ ನೀಡುತ್ತೀಯಾ ಎಂದು ಹೇಳಿ ಹಲ್ಲೆ ನಡೆಸುತ್ತಿದ್ದ. ಮದ್ಯಪಾನ ಮಾಡಿ ಮನೆಗೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ ಎಂದು ಶ್ರುತಿ ಮನೆಯವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ಪೊಲೀಸರು ಪ್ರಕರಣದ ಕುರಿತು ಮಾಹಿತಿ ನೀಡಿದ್ದಾರೆ.
 
ವಾರಾಂತ್ಯದಲ್ಲಿ ಪ್ರವಾಸಕ್ಕೆಂದು ಕರೆದುಕೊಂಡು ಹೋಗಿ ಹಿಂಸಿಸುತ್ತಿದ್ದ. ಈ ವರ್ಷದ ಜನವರಿ 15ರಂದು ಹೆಂಡತಿ ಜೊತೆ ಜಗಳ ಮಾಡಿ ಕೊಲೆಗೆ ಯತ್ನಿಸಿದ್ದ. ಆಕೆಯ ಚೀರಾಟ ಕೇಳಿ ಓಡಿ ಬಂದಿದ್ದ ಭದ್ರತಾ ಸಿಬ್ಬಂದಿ ಪ್ರಾಣ ಉಳಿಸಿದ್ದರು. ಎಂಬುದಾಗಿ ಶ್ರುತಿ ಕುಟುಂಬಸ್ಥರು ದೂರಿನಲ್ಲಿ ವಿವರಿಸಿದ್ದಾರೆ ಎಂದಿದ್ದಾರೆ.
 
ಭದ್ರತಾ ಸಿಬ್ಬಂದಿ ನೆರವಿನಿಂದ ಬಾಗಿಲು ಮುರಿದ ಕುಟುಂಬಸ್ಥರು:
 
20 ಮತ್ತು 21ರಂದು ಶ್ರುತಿಗೆ ಸತತವಾಗಿ ಕರೆ ಮಾಡಿದರೂ ಆಕೆ ಸ್ವೀಕರಿಸಿರಲಿಲ್ಲ. ಹೀಗಾಗಿ 22ರ ಬೆಳಿಗ್ಗೆ ಆಕೆಯ ಅಪಾರ್ಟ್‌ಮೆಂಟ್‌ಗೆ ಹೋಗಿದ್ದೆವು. ಮನೆಯ ಬೀಗ ಹಾಕಿತ್ತು. ಕಿಟಕಿಯಿಂದ ಇಣುಕಿ ನೋಡಿದಾಗ ಒಳಗೆ ಯಾರೂ ಕಾಣಲಿಲ್ಲ. ಭದ್ರತಾ ಸಿಬ್ಬಂದಿ ನೆರವಿನಿಂದ ಬಾಲ್ಕನಿಯ ಬಾಗಿಲು ಮುರಿದು ಒಳಗೆ ಹೋದಾಗ ಮಲಗುವ ಕೋಣೆಯಲ್ಲಿ ಶ್ರುತಿಯ ದೇಹ ನೇಣು ಬಿಗಿದ ಸ್ಥಿತಿಯಲ್ಲಿತ್ತು. ಗಂಡನೇ ಆಕೆಯನ್ನು ಕೊಲೆ ಮಾಡಿರುವ ಶಂಕೆ ಇದೆ ಎಂದು ಕುಟುಂಬಸ್ಥರು ದೂರಿನಲ್ಲಿ ವಿವರಿಸಿದ್ದಾರೆ ಎಂದಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

ಮುಂದಿನ ಸುದ್ದಿ
Show comments