Select Your Language

Notifications

webdunia
webdunia
webdunia
webdunia

ಕೋವಿಡ್ ಲಸಿಕೆ ಪೂರೈಕೆಗೆ ಸರಕಾರಕ್ಕೆ ಗಡುವು

Government deadline for supply of covid vaccine
magaluru , ಭಾನುವಾರ, 1 ಆಗಸ್ಟ್ 2021 (17:26 IST)
ಮಂಗಳೂರಿಗೆ ಬೇಡಿಕೆಗೆ ತಕ್ಕಷ್ಟು ಕೋವಿಡ್ -19 ನಿರೋಧಕ ಲಸಿಕೆಯನ್ನು ಪೂರೈಸಲು ರಾಜ್ಯ ಸರ್ಕಾರಕ್ಕೆ ಆಗಸ್ಟ್ 15 ರವರೆಗೆ ಗಡುವು ನೀಡುವವು. ಅದರೊಳಗೆ ಪೂರೈಕೆ ಮಾಡದೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಇವತ್ತು ಎಚ್ಚರಿಕೆ ನೀಡಿದೆ.
ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಸಿ ಅಧ್ಯಕ್ಷರು, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ದ.ಕ.ಜಿಲ್ಲೆಯಲ್ಲಿ ಕೊರೋನ ನಿಯಂತ್ರಿಸಲು ಬೇಕಾದ ಲಸಿಕೆಯನ್ನು ಬೇಡಿಕೆಗೆ ತಕ್ಕಷ್ಟು ಸಿಗುತ್ತಿಲ್ಲ. ಜನರು ಲಸಿಕೆಗಾಗಿ ಅಲೆದಾಡುತ್ತಿದ್ದಾರೆ. ದ.ಕ.ಜಿಲ್ಲಾಧಿಕಾರಿಯ ಬಳಿ ಕಾಂಗ್ರೆಸ್ ನಿಯೋಗ ತೆರಳಿ ಈ ಬಗ್ಗೆ ಸಮಾಲೋಚನೆ ನಡೆಸುವಾಗ ಕಡಿಮೆ ಪ್ರಮಾಣದ ಲಸಿಕೆ ಬರುತ್ತಿಲ್ಲ ಎಂಬ ಉತ್ತರವನ್ನು ನೀಡಲಾಗಿದೆ. ರಾಜ್ಯ ಸರ್ಕಾರಕ್ಕೆ ದ.ಕ.ಜಿಲ್ಲೆಯ ಜನತೆಯ ಮೇಲೆ ಎಷ್ಟು ಕಾಳಜಿ ಇದೆ ಎಂದು ಸ್ಪಷ್ಟಪಡಿಸಲಾಗಿದೆ. ಆಗಸ್ಟ್ 15 ರೊಳಗೆ ಬೇಡಿಕೆಗೆ ಈ ರೀತಿಯಾಗಿ ಕೋವಿಡ್ ಲಸಿಕೆಯನ್ನು ಪೂರೈಸಬೇಕು. ಇಲ್ಲದಿದ್ದರೆ ಹೋರಾಟ ಮಾಡುವುದು ಅನಿವಾರ್ಯವಾಗಿದೆ.
webdunia

Share this Story:

Follow Webdunia kannada

ಮುಂದಿನ ಸುದ್ದಿ

ತಾಂತ್ರಿಕ ಶಿಕ್ಷಣ ಇಲಾಖೆಯ 372 ಬೋಧಕರ ವರ್ಗಾವಣೆ