Publish Date: Tue, 19 Feb 2019 (16:13 IST)
Updated Date: Tue, 19 Feb 2019 (16:15 IST)
ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ದೇಶದ್ರೋಹಿಗಳನ್ನು, ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಬಂದ್ ಗೆ ಕರೆ ನೀಡಲಾಗಿದೆ.
ಕೋಲಾರ ಬಂದ್ ಗೆ ಹಿಂದೂಪರ ಸಂಘಟನೆಗಳು ಕರೆ ನೀಡಿವೆ. ಶ್ರೀರಾಮ ಸೇನೆ ಸೇರಿದಂತೆ ಹಿಂದೂಪರ ಸಂಘಟನೆ ಕಾರ್ಯಕರ್ತರು ರಾತ್ರಿ ನಗರದಲ್ಲಿ ಮೆರವಣಿಗೆ ನಡೆಸಿ, ಕೋಲಾರ ಬಂದ್ ಗೆ ಸಹಕರಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು. ವರ್ತಕರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗುಟ್ಟುಗಳನ್ನು ಮುಚ್ಚಿ ಬಂದ್ ಗೆ ಬೆಂಬಲ ಸೂಚಿಸುವಂತೆ ಕೋರಲಾಯಿತು.
ಹುತಾತ್ಮ ಯೋಧರಿಗೆ ನಮನ ಸಲ್ಲಿಸಲು ಅಲ್ಪಸಂಖ್ಯಾತರು ಆಯೋಜಿಸಿದ್ದ ಶೃದ್ಧಾಂಜಲಿ ಸಭೆ ಹಾಗೂ ಪ್ರತಿಭಟನೆಯಲ್ಲಿ ಕೆಲ ಕಿಡಿಗೇಡಿಗಳು ದೇಶ ವಿರೋಧಿ ಘೋಷಣೆ ಕೂಗಿದ ಆರೋಪ ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ಶ್ರೀರಾಮ ಸೇನೆ ಹಾಗೂ ಎಬಿವಿಪಿ ಸಂಘಟನೆ ಕಾರ್ಯಕರ್ತರು, ಕೋಲಾರ ನಗರ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ.