Select Your Language

Notifications

webdunia
webdunia
webdunia
webdunia

ಏಪ್ರಿಲ್ 13ರವರೆಗೆ ಡೆಡ್​​ಲೈನ್

Deadline until April 13th
bangalore , ಮಂಗಳವಾರ, 5 ಏಪ್ರಿಲ್ 2022 (20:32 IST)
ಮಸೀದಿಯಲ್ಲಿ ಧ್ವನಿವರ್ಧಕ ಬಳಸಲು ಅವಕಾಶ ನೀಡದಂತೆ ಹಿಂದೂ ಸಂಘಟನೆಗಳು ಸರ್ಕಾರಕ್ಕೆ ಒತ್ತಾಯಿಸಿವೆ. ಧ್ವನಿವರ್ಧಕದಿಂದ ಶಬ್ದ ಮಾಲಿನ್ಯವಾಗುತ್ತದೆ. ಹೀಗಾಗಿ ತಕ್ಷಣ ಈ ಬಗ್ಗೆ ಕ್ರಮಕೈಗೊಳ್ಳಬೇಕು ಅಂತ ಆಗ್ರಹಿಸಿದ್ದಾರೆ. ಇನ್ನು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ರಾಜ್ಯ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದು, ಏಪ್ರಿಲ್ 13ರವರೆಗೆ ಡೆಡ್​ಲೈನ್ ನೀಡಿದ್ದಾರೆ. ಕೂಡಲೇ ಅಜಾನ್ ನಿರ್ಬಂಧ ಕೈಗೊಳ್ಳಬೇಕು. ಸರ್ಕಾರ ಕ್ರಮ ಕೈಗೊಳ್ಳದೆ ಹೋದರೆ ಉಗ್ರ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ. ಏಪ್ರಿಲ್ 14ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಅಂತ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

‘ನಾನು ಯಾವತ್ತೂ ಯಾರನ್ನೂ ಬೈಯುವುದಿಲ್ಲ’