Select Your Language

Notifications

webdunia
webdunia
webdunia
webdunia

ಕೊರೊನಾ ವಾರಿಯರ್ಸ್ ಮೇಲೆ ಮಾರಣಾಂತಿಕ ಹಲ್ಲೆ

ಕೊರೊನಾ ಪಾಸಿಟಿವ್
ಕೊರೊನಾ ಸೋಂಕು ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಲು ಮುಂದಾದ ಆರೋಗ್ಯ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.

ಕೋವಿಡ್-19 ಸೋಂಕು ಪರೀಕ್ಷೆಯಲ್ಲಿ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮರಮಂಚಿ ಹಾಗೂ ಚಿಂಚೋಳಿ ತಾಲೂಕಿನ ಪಸ್ತಾಪುರ ಗ್ರಾಮಗಳಲ್ಲಿನ ವ್ಯಕ್ತಿಗಳನ್ನು ಮುಂದಿನ ಚಿಕಿತ್ಸೆಗಾಗಿ ನಿಗದಿತ ಕೋವಿಡ್ ಆಸ್ಪತ್ರೆಗೆ ಕರೆತರಲು ಮುಂದಾಗಿತ್ತು.

ಈ ವೇಳೆ ಆರೋಗ್ಯ ಇಲಾಖೆ ಹಾಗೂ ಇತರೆ ಇಲಾಖೆಗಳ ಸಿಬ್ಬಂದಿಗಳ ಮೇಲೆ ಸಾರ್ವಜನಿಕರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿರುವ ವ್ಯಕ್ತಿಗಳ ವಿರುದ್ಧ ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಪೊಲೀಸ್ ನೇರ ನೇಮಕಾತಿ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ