Select Your Language

Notifications

webdunia
webdunia
webdunia
webdunia

ಮಹಿಳಾ ಸೆಕ್ಯೂರಿಟಿ ಗಾರ್ಡ್ ಗೆ ಲೈಂಗಿಕ ಕಿರುಕುಳ ನೀಡಿದ ಇಎಸ್‍ ಐ ಆಸ್ಪತ್ರೆಯ ಡೀನ್

ಮಹಿಳಾ ಸೆಕ್ಯೂರಿಟಿ ಗಾರ್ಡ್ ಗೆ  ಲೈಂಗಿಕ ಕಿರುಕುಳ ನೀಡಿದ ಇಎಸ್‍ ಐ ಆಸ್ಪತ್ರೆಯ ಡೀನ್
ಕಲಬುರಗಿ , ಶುಕ್ರವಾರ, 11 ಅಕ್ಟೋಬರ್ 2019 (09:52 IST)
ಕಲಬುರಗಿ : ಇಎಸ್‍ ಐ ಆಸ್ಪತ್ರೆಯ ಡೀನ್ ಡಾ. ನಾಗರಾಜ್, ಆಸ್ಪತ್ರೆಯ ಮಹಿಳಾ ಸೆಕ್ಯೂರಿಟಿ ಗಾರ್ಡ್ ಗೆ ತನ್ನ ಜೊತೆ ಅನೈತಿಕ ಸಂಬಂಧ ಮಾಡುವಂತೆ ಒತ್ತಾಯ ಮಾಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.



ಬಿಹಾರದ ಮೂಲದವಳಾದ ಸಂತ್ರಸ್ತೆ ಕಲಬುರಗಿ ಇಎಸ್‍ ಐ ಆಸ್ಪತ್ರೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದು, ಆಕೆ ರಾತ್ರಿ ಪಾಳೆಯದಲ್ಲಿ ಕೆಲಸ ಮಾಡುವಾಗ ಡೀನ್ ಡಾ. ನಾಗರಾಜ್, ಇಲ್ಲಿ ಕೆಲಸ ಮಾಡಬೇಕು ಎಂದರೆ, ನನ್ನ ಜೊತೆ  ಅನೈತಿಕ ಸಂಬಂಧ ಹೊಂದಬೇಕು. ಇಲ್ಲವಾದರೆ ಕೆಲಸದಿಂದ ತೆಗೆಯುವುದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.


 

ಈ ಬಗ್ಗೆ ಮಹಿಳೆ ಕಲಬುರಗಿ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದರೆ ಈ ವೈದ್ಯ ನಾಗರಾಜ್ ಕನ್ನಡದ ಖ್ಯಾತ ನಟನ ಸಹೋದರಾನಾಗಿದ್ದು, ಹೀಗಾಗಿ ಪೊಲೀಸರು ಬಂಧಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಸಂತ್ರಸ್ತೆ ಅಳಲು ತೋಡಿಕೊಂಡಿದ್ದಾರೆ.


 

 


Share this Story:

Follow Webdunia kannada

ಮುಂದಿನ ಸುದ್ದಿ

ಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ಇಂದು ನಿಧನ