Publish Date: Sat, 16 May 2020 (17:56 IST)
Updated Date: Sat, 16 May 2020 (18:00 IST)
ಮಹಾರಾಷ್ಟ್ರದಿಂದ ಬಂದಿದ್ದ ವ್ಯಕ್ತಿಯೊಬ್ಬ ಕ್ವಾರಂಟೈನ್ ನಲ್ಲಿದ್ದಾಗಲೇ ಸಾವನ್ನಪ್ಪಿದ್ದು, ಇದರಿಂದ ಜನರು ಆತಂಕದಲ್ಲಿದ್ದಾರೆ.
ಉಡುಪಿ ಜಿಲ್ಲೆಯ ಕುಂದಾಪುರದ ವ್ಯಕ್ತಿ ಮಣಿಪಾಲ ಕೆಎಂಸಿಯಲ್ಲಿ ನಿಧನರಾಗಿದ್ದಾರೆ.
ನಿಧನ ಹೊಂದಿದ ವ್ಯಕ್ತಿಯ ಗಂಟಲ ದ್ರವ ಪರೀಕ್ಷೆಗೆ ಕಳಿಸಲಾಗಿತ್ತು. ಮೊದಲು ಚಿಕಿತ್ಸೆಗಾಗಿ ಕುಂದಾಪುರದ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಎರಡು ದಿನಗಳ ಹಿಂದೆ ಮಣಿಪಾಲ ಕೆಎಂಸಿಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಾಗಿದ್ದರು.
ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದ ವ್ಯಕ್ತಿಯ ಕೋವಿಡ್ ಪರೀಕ್ಷೆಯ ವರದಿಗಾಗಿ ಜಿಲ್ಲಾಡಳಿತ ಕಾಯುತ್ತಿದೆ.