ಬೆಳಗಾವಿಯಲ್ಲಿ 31 ಕೃಷ್ಣಮೃಗಗಳ ಸಾವು ಪ್ರಕರಣ, ಸಿಬ್ಬಂದಿಗೆ ಢವಢವ

Sampriya
ಸೋಮವಾರ, 17 ನವೆಂಬರ್ 2025 (17:17 IST)
ಬೆಳಗಾವಿ: ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿರುವ ಬೆಳಗಾವಿಯ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣಮೃಗಗಳ ಸಾವು ಪ್ರಕರಣದಲ್ಲಿ ವೈದ್ಯರು ಮತ್ತು ಸಿಬ್ಬಂದ ನಿರ್ಲಕ್ಷ್ಯ ಕಂಡುಬಂದಲ್ಲಿ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು  ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಕೆ.ರಂಗಸ್ವಾಮಿ

ಕಿರು ಮೃಗಾಲಯಕ್ಕೆ ಸೋಮವಾರ ಭೇಟಿ ನೀಡಿ, ಪ್ರಕರಣದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮೇಲ್ನೋಟಕ್ಕೆ ಸಿಬ್ಬಂದಿ ನಿರ್ಲಕ್ಷ್ಯ ಕಂಡುಬಂದಿದ್ದು ಪ್ರಾಣಿಗಳ ಒಳಾಂಗಗಳ ಪರೀಕ್ಷೆ ವರದಿ ಮತ್ತು ತನಿಖಾ ವರದಿಗೆ ಕಾಯುತ್ತಿದ್ದೇವೆ. ಸಿಬ್ಬಂದಿ ಲೋಪವೆಸಗಿರುವುದು ದೃಢಪಟ್ಟರೆ, ಅವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು  ಹೇಳಿದರು.

ಅಳಿವಿನಂಚಿನಲ್ಲಿರುವ  ಕೃಷ್ಣಮೃಗಗಳಂಥ ಪ್ರಬೇಧಗಳನ್ನು ಸಂರಕ್ಷಿಸಲು ಮತ್ತು ಅವುಗಳ ಸಂಖ್ಯೆ ಹೆಚ್ಚಿಸಲು ಮೃಗಾಲಯದಲ್ಲಿ ಇರಿಸಲಾಗಿದೆ. ಬ್ಯಾಕ್ಟೀರಿಯಾ ಸೋಂಕಿನಿಂದ ಅವು ಸಾವನ್ನಪ್ಪಿವೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ, ಪರೀಕ್ಷಾ ವರದಿಗೆ ನಾವು ಕಾಯುತ್ತಿದ್ದೇವೆ ಎಂದು ಪ್ರತಿಕ್ರಿಯಿಸಿದರು.

ಪ್ರಾಣಿಗಳ ಆರೋಗ್ಯವನ್ನು ನಿಯಮಿತವಾಗಿ ಮೃಗಾಲಯದಲ್ಲಿನ ವೈದ್ಯಕೀಯ ತಂಡವು ಮೇಲ್ವಿಚಾರಣೆ ಮಾಡಬೇಕು. ಆದರೆ ಇದೀಗ ಬೆಳಗಾವಿ ಮೃಗಾಲಯದಲ್ಲಿ ಅದು ನಡೆದಿಲ್ಲ ಎಂಬಂತೆ ತೋರುತ್ತಿದೆ. 

ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನೀಲ ಪನ್ವಾರ್ ಕೂಡ ಭಾನುವಾರ ಕಿರು ಮೃಗಾಲಯಕ್ಕೆ ಭೇಟಿ ನೀಡಿದ್ದು, ವರದಿ ಸಲ್ಲಿಸಲಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಕೆಂಪು ಕೋಟೆ ಸ್ಫೋಟ ಪ್ರಕರಣ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪ್ರಧಾನಿ ಭೇಟಿ ಮೊದಲು ಸಿಎಂ ನೆರೆ ಪರಿಹಾರ ಕೊಡಬೇಕಿತ್ತು: ಸಿಟಿ ರವಿ

ಎಲ್ಲಕ್ಕಿಂತ ಸೋನಿಯಾ, ರಾಹುಲ್ ಗಾಂಧಿ ನಿರ್ಣಯವೇ ಅಂತಿಮ: ಎಂಬಿ ಪಾಟೀಲ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ: ದಾಖಲೆಯ 10ನೇ ಬಾರಿ ಗದ್ದುಗೇರಲು ಮುಹೂರ್ತ ಫಿಕ್ಸ್‌

ಮಾನವ ಹಕ್ಕು ಉಲ್ಲಂಘನೆ ಸಾಬೀತು: ಬಾಂಗ್ಲಾ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ ಗಲ್ಲುಶಿಕ್ಷೆ ಪ್ರಕಟ

ಮುಂದಿನ ಸುದ್ದಿ
Show comments