Webdunia - Bharat's app for daily news and videos

Install App

ಒಂದೇ ಕುಟುಂಬದ 6 ಮಂದಿ ಸಾವು ಪ್ರಕರಣ: ಮುಗಿಲು ಮುಟ್ಟಿದ ಆಕ್ರಂದನದ ಮಧ್ಯೆ ಅಂತ್ಯಕ್ರಿಯೆ

Sampriya
ಭಾನುವಾರ, 22 ಡಿಸೆಂಬರ್ 2024 (11:25 IST)
ಬೆಂಗಳೂರು: ನೆಲಮಂಗಲ ಭೀಕರ ಅಪಘಾತದಲ್ಲಿ ಶನಿವಾರ ಸಾವೀಗೀಡಾಗಿದ್ದ ಒಂದೇ ಕುಟುಂಬದ ಆರು ಮಂದಿಯನ್ನು ಮಹಾರಾಷ್ಟ್ರದ ಸ್ವಗ್ರಾಮದಲ್ಲಿ ಇಂದು ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಇಂದು ಬೆಳಿಗ್ಗೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಮೊರಬಗಿ ಗ್ರಾಮಕ್ಕೆ ಮೃತದೇಹಗಳು ರವಾನೆಯಾಗಿವೆ. ಮೂರು ಅಂಬುಲೆನ್ಸ್ ಮೂಲಕ ಆರು ಮೃತದೇಹಗಳನ್ನು ಕರೆತರಲಾಗಿದೆ. ಮೃತದೇಹಗಳನ್ನು ನೋಡುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಮೃತ ಚಂದ್ರಮ್ ಅವರ ಜಮೀನಿನಲ್ಲಿ ಲಿಂಗಾಯತ ಸಮಾಜದ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡಿದ್ದರು.  ಮೃತದೇಹಗಳಿಗೆ ಕುಟುಂಬಸ್ಥರು ಪೂಜೆ ನೆರವೇರಿಸಿದ ಬಳಿಕ ಬೆಂಕಿ ಸ್ಪರ್ಶಿಸುವ ಮೂಲಕ ಅಂತ್ಯಕ್ರಿಯೆ ನೆರವೇರಿಸಿದರು.

ಬೆಂಗಳೂರು ಹೊರವಲಯದ ನೆಲಮಂಗಲ ಬಳಿ ಭೀಕರ ಸರಣಿ ಅಪಘಾತ ಸಂಭವಿಸಿತ್ತು. ಚಾಲಕನ ನಿಯಂತ್ರಣ ತಪ್ಪಿದ ಕಂಟೇನರ್, ವೋಲ್ವೋ ಕಾರಿನ ಮೇಲೆ ಉರುಳಿದ್ದ ಪರಿಣಾಮ ಕಾರಲ್ಲಿದ್ದ ಒಂದೇ ಕುಟುಂಬದ ಆರು ಮಂದಿ ಬಲಿ ಆಗಿದ್ದರು. ಮೃತರನ್ನು 48 ವರ್ಷದ ಐಟಿ ಉದ್ಯಮಿ ಚಂದ್ರಮ್ ಯೇಗಪ್ಪಗೋಳ್, 42 ವರ್ಷದ ಗೌರಾಬಾಯಿ, 12 ವರ್ಷದ ದೀಕ್ಷಾ, 6 ವರ್ಷದ ಆರ್ಯ, ಜ್ಞಾನ್ ಏಗಪ್ಪ, 36 ವರ್ಷದ ವಿಜಯಲಕ್ಷ್ಮಿ ಎಂದು ಗುರುತಿಸಲಾಗಿದೆ.

ಮೃತ ಉದ್ಯಮಿ ಚಂದ್ರಮ್ ಮೂಲತಃ ಮಹಾರಾಷ್ಟ್ರದ ಜತ್ ತಾಲೂಕಿನ ಮೊರಬಗಿ ಗ್ರಾಮದವರು. ಬೆಂಗಳೂರಿನಲ್ಲಿ ಐಎಎಸ್‌ಟಿ ಎಂಬ ಸಂಸ್ಥೆ ಸ್ಥಾಪಿಸಿ, ಹಲವು ಜನಕ್ಕೆ ಕೆಲಸ ಕೊಟ್ಟಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments