Select Your Language

Notifications

webdunia
webdunia
webdunia
webdunia

ಅಮೆರಿಕಾದಲ್ಲಿ ಹಂದಿ ಹೃದಯ ಕಸಿ ಮಾಡಿಕೊಂಡಿದ್ದ ವ್ಯಕ್ತಿ ಸಾವು

ಅಮೆರಿಕಾದಲ್ಲಿ ಹಂದಿ ಹೃದಯ ಕಸಿ ಮಾಡಿಕೊಂಡಿದ್ದ ವ್ಯಕ್ತಿ ಸಾವು
bangalore , ಗುರುವಾರ, 10 ಮಾರ್ಚ್ 2022 (20:32 IST)
ಇತ್ತೀಚೆಗಷ್ಟೇ ಹಂದಿ ಹೃದಯ ಕಸಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಮೂಲಗಳು ಮಾಹಿತಿ ನೀಡಿದೆ.
2022 ರ ಜನವರಿ 11 ರಂದು ಅಮೆರಿಕದ ಡೇವಿಡ್ ವಾರ್ನರ್ ಹಂದಿ ಹೃದಯ ಕಸಿ ಶಸ್ತ್ರಚಿಕಿತ್ಸೆಗೊಳಗಾಗಿದ್ದರು.
ವೈದ್ಯಕೀಯವಾಗಿ ಪ್ರಥಮವಾಗಿ, ವೈದ್ಯರು ಹಂದಿಯ ಹೃದಯವನ್ನು ಮನುಷ್ಯನಿಗೆ ಕಸಿ ಮಾಡಿದ್ದರು. ಶಸ್ತ್ರಚಿಕಿತ್ಸೆಯ ಮೂರು ದಿನಗಳ ನಂತರ ಅವರು ಆರೋಗ್ಯವಾಗಿದ್ದಾರೆ ಎಂದು ಮೇರಿಲ್ಯಾಂಡ್ ಆಸ್ಪತ್ರೆ ಸೋಮವಾರ ತಿಳಿಸಿತ್ತು. ಆದರೆ ಕೆಲವು ದಿನಗಳ ನಂತರ ಹಂದಿ ಹೃದಯ ಕಸಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.
ಅಮೆರಿಕದ ಮೇರಿಲ್ಯಾಂಡ್ ಯೂನಿವರ್ಸಿಟಿ ಸ್ಕೂಲ್ ಆಫ್ ಮೆಡಿಸಿನ್‌ನಲ್ಲಿ 57 ವರ್ಷದ ವ್ಯಕ್ತಿಗೆ ನಡೆಸಿದ ಮೊದಲ ಯಶಸ್ವಿ ಹಂದಿ ಹೃದಯ ಕಸಿ ಶಸ್ತ್ರ ಚಿಕಿತ್ಸೆ ವೈದ್ಯಕೀಯ ವಿಜ್ಞಾನದಲ್ಲಿ ಪ್ರಮುಖವಾದ ಮೈಲಿಗಲ್ಲು ಎಂದು ಹೃದಯ ಮತ್ತು ಶ್ವಾಸಕೋಶ ಕಸಿ ಸಂಸ್ಥೆ ಕಿಮ್ಸ್ ಆಸ್ಪತ್ರೆ ಅಧ್ಯಕ್ಷರು ಹಾಗೂ ಕಾರ್ಯಕ್ರಮ ನಿರ್ದೇಶಕ ಡಾ. ಸಂದೀಪ್ ಅತ್ತಾವರ ಹೇಳಿದ್ದರು. ಅಂದು ನಡೆದ ಆಪರೇಷನ್ ಸಕ್ಸಸ್ ಆಗಿದ್ದರೂ , ಆಪರೇಷನ್ ನಡೆದ ಎರಡು ತಿಂಗಳ ಬಳಿಕ ವ್ಯಕ್ತಿ ಸಾವನ್ನಪ್ಪಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪಂಚ ರಾಜ್ಯ ಮತ ಎಣಿಕೆ