Select Your Language

Notifications

webdunia
webdunia
webdunia
webdunia

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

Chief Minister Siddaramaiah, tiger death due to poisoning, Forest Minister Ishwar Khandre

Sampriya

ಬೆಂಗಳೂರು , ಭಾನುವಾರ, 29 ಜೂನ್ 2025 (11:24 IST)
ಬೆಂಗಳೂರು: ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಷಪ್ರಾಶನದಿಂದ ಐದು ಹುಲಿಗಳು ಸಾವನ್ನಪ್ಪಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ತನಿಖಾ ವರದಿ ಬಂದ ಕೂಡಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕೈಗೊಳ್ಳುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದಾರೆ. 

ಪ್ರಕರಣ ಸಂಬಂಧ ತನಿಖೆ ಕೈಗೊಂಡು ಈಗಾಗಲೇ ಕೆಲವರನ್ನು ಬಂಧಿಸಲಾಗಿದೆ. ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. 

ಶನಿವಾರ ಸಂಜೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ಹುಲಿಗಳು ಸಾವು ಮತ್ತು ಇಲಾಖೆ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಹುಲಿಗಳ ಹತ್ಯಾಕಾಂಡ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಹಸುಗಳನ್ನ ಬೇಟೆಯಾಡಿ ತಿಂದಿದ್ದಕ್ಕೆ ವಿಷಪ್ರಾಶನ ಮಾಡಿ ಹುಲಿಗಳನ್ನ ಕೊಂದಿರುವ ಆರೋಪ ಕೇಳಿಬಂದಿದೆ. 4-5 ವರ್ಷದ ಹೆಣ್ಣು ಹುಲಿ ಅಸಹಜವಾಗಿ ಮೃತಪಟ್ಟಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. 

ಶುಕ್ರವಾರ ಅರಣ್ಯ ಸಿಬ್ಬಂದಿ ಗಸ್ತು ತಿರುಗುವ ವೇಳೆ ಕಳೇಬರ ಪತ್ತೆ ಆಗಿದ್ದು, ವೈದ್ಯರು ಹುಲಿಗಳ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಹುಲಿಗಳ ಸಾವಿಗೆ ವಿಷಪ್ರಾಶನವೇ ಕಾರಣ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ