Select Your Language

Notifications

webdunia
webdunia
webdunia
webdunia

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸರಣಿ ಬಾಣಂತಿಯರ ಸಾವು ಪ್ರಕರಣ: ಬಿಗ್‌ಟ್ವಿಸ್ಟ್‌

Bellary District Hospital Case, Big Breaking, Intravenous Injection Side Effect

Sampriya

ಬಳ್ಳಾರಿ , ಶುಕ್ರವಾರ, 29 ನವೆಂಬರ್ 2024 (14:46 IST)
ಬಳ್ಳಾರಿ: ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವರದಿ ಹೊರಬಂದಿದೆ. ಇದರಲ್ಲಿ ಇಡೀ ಅನಾಹುತಕ್ಕೆ ಗ್ಲೂಕೋಸ್ ಸಹಿತ ಇಂಟ್ರಾವೀನಸ್  ದ್ರಾವಣ ಕಾರಣ ಎಂದು ಬಹಿರಂಗವಾಗಿದೆ.

ಉನ್ನತ ಮೂಲಗಳ ಪ್ರಕಾರ ಬಾಣಂತಿಯರ ಸರಣಿ ಸಾವಿನ ಕುರಿತು ತನಿಖೆ ನಡೆಸಿದ ತಂಡ ಇದೀಗ ವರದಿಯನ್ನು ನೀಡಿದ್ದು, ಅದರಲ್ಲಿ ಗರ್ಭಿಣಿಯರಿಗೆ ಶಸ್ತ್ರಚಿಕಿತ್ಸೆ ವೇಳೆ ನೀಡಿದ್ದ ದ್ರಾವಣ ಕಳಪೆಯಾಗಿತ್ತು ಎಂಬ ವರದಿಯಲ್ಲಿ ಬಹಿರಂಗವಾಗಿದೆ.

ಇದೀಗ ವರದಿಯ ಅನುಸಾರ ಇಂಟ್ರಾವೀನಸ್ ದ್ರಾವಣ ಬಳಕೆ ಮಾಡದಂತೆ ಈಗಾಗಲೇ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಗ್ಲೂಕೋಸ್ ಬಳಸದಂತೆ ರಾಜ್ಯ ವೈದ್ಯಕೀಯ ಸರಬರಾಜು ನಿಗಮವು ರಾಜ್ಯದ ಎಲ್ಲ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಪತ್ರ ಬರೆದಿದೆ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿನ ಸಾವಿನ ಬಗ್ಗೆ ತನಿಖೆ ನಡೆಸಲು ಸರ್ಕಾರ ತಂಡ ಕಳುಹಿಸಿತ್ತು. ಇದೀಗ ಶಸ್ತ್ರ ಚಿಕಿತ್ಸೆ ವೇಳೆ ಈ ಕಳಪೆ ಐವಿ ದ್ರಾವಣದಿಂದ ದೇಹದಲ್ಲಿ ದಿಢೀರ್ ಬದಲಾವಣೆ, ಅಡ್ಡ ಪರಿಣಾಮಗಳಿಂದ ಸಾವು ಸಂಭವಿಸಿದೆ ಎಂದು ತಂಡ ವರದಿ ಸಲ್ಲಿಕೆ ಮಾಡಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಮಂತ್ರಾಲಯದಲ್ಲಿ ಹುಂಡಿ ಎಣಿಕೆ ಎಣಿಕೆ: 31 ದಿನಗಳಲ್ಲಿ ಬರೋಬ್ಬರಿ ₹ 3.92 ಕೋಟಿ ಸಂಗ್ರಹ