Publish Date: Sun, 13 Feb 2022 (21:33 IST)
Updated Date: Sun, 13 Feb 2022 (21:35 IST)
ನಿರ್ಮಾಣ ಹಂತದಲ್ಲಿನ ಕಟ್ಟಡದಿಂದ ಆಯತಪ್ಪಿ ಬಿದ್ದ ಕೂಲಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಮೈಸೂರಿನ ಎನ್.ಆರ್.ಮೊಹಲ್ಲಾದ ಉಸ್ಮಾನಿಯಾ ಬ್ಲಾಕ್‌ನಲ್ಲಿ ನಡೆದಿದೆ.
ಸಿದ್ದರಾಜು(70) ಮೃತ ದುರ್ದೈವ. ಮೈಸೂರಿನ ಕೆಸರೆ ನಿವಾಸಿಯಾದ ಈತ ನಿರ್ಮಾಣ ಹಂತದಲ್ಲಿದ್ದ ಕಟ್ಟಡವೊಂದರ ಮೊದಲನೆ ಮಹಡಿಯಲ್ಲಿ ಗಾರೆ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಬಿದ್ದು ಕೆಳಗ್ಗೆ ಬಿದ್ದಿದ್ದು, ತೀವ್ರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಎನ್.ಆರ್.ಠಾಣೆ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.