Select Your Language

Notifications

webdunia
webdunia
webdunia
webdunia

ಮೇಟಿ ಪ್ರಕರಣದಿಂದಾಗಿ ರಾಜ್ಯ ಸರಕಾರದಿಂದಲೇ ಜೀವ ಬೆದರಿಕೆ: ರಾಜಶೇಖರ್ ಮುಲಾಲಿ

ಮೇಟಿ ಪ್ರಕರಣದಿಂದಾಗಿ ರಾಜ್ಯ ಸರಕಾರದಿಂದಲೇ ಜೀವ ಬೆದರಿಕೆ: ರಾಜಶೇಖರ್ ಮುಲಾಲಿ
ಬೆಂಗಳೂರು , ಬುಧವಾರ, 4 ಜನವರಿ 2017 (17:08 IST)
ರಾಜ್ಯ ಸರಕಾರದಿಂದಲೇ ನನಗೆ ಜೀವ ಬೆದರಿಕೆ ಇದೆ ಎಂದು ಆರ್‌ಟಿಐ ಕಾರ್ಯಕರ್ತ ರಾಜಶೇಖರ್ ಮುಲಾಲಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
 
ಮಾಜಿ ಸಚಿವ ಎಚ್.ವೈ.ಮೇಟಿ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನಹಳ್ಳಿ ಶಾಸಕರ ಜೊತೆ ಸಂಬಂಧವಿದೆ ಎಂದು ಪರೋಕ್ಷವಾಗಿ ಮಾಧ್ಯಮಗಳಲ್ಲಿ ಪ್ರಕಟವಾದ ಹಿನ್ನೆಲೆಯಲ್ಲಿ ತಮಗೆ ಸರಕಾರದಿಂದಲೇ ಜೀವ ಭಯ ಇದೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
 
ಶಾಸಕ ಎಂ.ಪಿ.ರವೀಂದ್ರ ಹೆಸರು ಬಳಸದೇ ಪರೋಕ್ಷವಾಗಿ ಸರಕಾರವೇ ನನಗೆ ಜೀವ ಬೆದರಿಕೆ ಒಡ್ಡುತ್ತಿದೆ ಎಂದು ಆರ್‌ಟಿಐ ಕಾರ್ಯಕರ್ತ ರಾಜಶೇಖರ್ ಮುಲಾಲಿ ಆರೋಪಿಸಿದ್ದಾರೆ. 
 
ಮಾಜಿ ಸಚಿವ ಎಚ್.ವೈ.ಮೇಟಿ ರಾಸಲೀಲೆ ವಿಡಿಯೋ ಸಿಡಿಯನ್ನು ದೆಹಲಿಯಲ್ಲಿ ಆರ್‌ಟಿಐ ಕಾರ್ಯಕರ್ತ ರಾಜಶೇಖರ್ ಮುಲಾಲಿ ಅವರು ಬಿಡುಗಡೆಗೊಳಿಸಿದ್ದರು. ಸಚಿವರ ರಾಸಲೀಲೆ ಸಿಡಿ ಬಿಡುಗಡೆಯಾಗುತಿದ್ದಂತೆ ನೈತಿಕ ಹೊಣೆ ಹೊತ್ತು ಅಬಕಾರಿ ಸಚಿವ ಎಚ್.ವೈ.ಮೇಟಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಲೈಂಗಿಕ ದೌರ್ಜನ್ಯ ಪ್ರಕರಣಗಳು ನಾಗರಿಕ ಸಮಾಜಕ್ಕೆ ಮಾರಕ: ಉಗ್ರಪ್ಪ