ಗುತ್ತಿಗೆದಾರನಿಗೆ ಕೊಲೆ ಬೆದರಿಕೆ: ಬಿಜೆಪಿ ಶಾಸಕ ಮುನಿರತ್ನ ಪೊಲೀಸ್ ವಶಕ್ಕೆ

Sampriya
ಶನಿವಾರ, 14 ಸೆಪ್ಟಂಬರ್ 2024 (18:21 IST)
Photo Courtesy X
ಬೆಂಗಳೂರು: ಗುತ್ತಿಗೆದಾರನಿಗೆ ಕೊಲೆ ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿದ ಆರೋಪದಡಿಯಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ನಂಗಲಿ ಗ್ರಾಮದ ಬಳಿ ಮುನಿರತ್ನ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗುತ್ತಿಗೆದಾರ ಚಲುವರಾಜು ಅವರಿಗೆ ಅವಾಚ್ಯವಾಗಿ ಬೈದು, ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿ ಮುನಿರತ್ನ ಮಾತನಾಡಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು. ಈ ಸಂಬಂಧ ಶಾಸಕ ಮುನಿರತ್ನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ಕೂಡಾ ದಾಖಲಾಗಿದೆ. ಇದೀಗ ಅವರನ್ನು ವಶಕ್ಕೆ ಪಡೆಯಲಾಗಿದೆ.

ಕೋಲಾರದಿಂದ ಆಂಧ್ರದ ಚಿತ್ತೂರು ಕಡೆಗೆ ಹೋಗಲು ಶಾಸಕ ಮುನಿರತ್ನ ಮುಂದಾಗಿದ್ದರು. ಅವರ ಮೊಬೈಲ್ ಲೊಕೇಶನ್ ಟ್ರ್ಯಾಕ್ ಮಾಡಿ ಅವರಿದ್ದ ಸ್ಥಳವನ್ನು ಪತ್ತೆ ಹಚ್ಚಿ, ವಶಕ್ಕೆ ಪಡೆದಿದ್ದಾರೆ.  ಮುನಿರತ್ನ ಅವರನ್ನು ವಶಕ್ಕೆ ಪಡೆದು ಬೆಂಗಳೂರಿಗೆ ಕರೆತರಲಾಗುತ್ತಿದೆ ಎನ್ನುವ ಮಾಹಿತಿಯೂ ಲಭ್ಯವಾಗಿದೆ.

ಇನ್ನೂ ಈ ಪ್ರಕರಣ ಸಂಬಂಧ ವಶಕ್ಕೂ ಮುನ್ನಾ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮುನಿರತ್ನ ಅವರು 'ಆ ಆಡಿಯೋ ನನ್ನದೇ ಎಂದು ಸಾಬೀತಾದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಇದೆಲ್ಲಾ ಕಾಂಗ್ರೆಸ್ ಕುತಂತ್ರ ಎಂದು ಆರೋಪಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಡುಪಿ ಕೃಷ್ಣನ ಭೇಟಿಗೆ ಬರಲಿದ್ದಾರೆ ಪ್ರಧಾನಿ ಮೋದಿ

ಅಣ್ಣನೂ ಸಿಎಂ ಆಗಬೇಕು ಎನ್ನೋದೇ ನನ್ನಾಸೆ: ಡಿಕೆ ಸುರೇಶ್

ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಕೊಟ್ಟ ಹಣದ ಕಂತೆಯೆಷ್ಟು: ಬಿ ಶ್ರೀರಾಮುಲು ಬಾಂಬ್

Karnataka Weather: ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ ಗಮನಿಸಿ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments