Publish Date: Sun, 03 Jul 2022 (07:14 IST)
Updated Date: Sun, 03 Jul 2022 (09:16 IST)
ಬೆಂಗಳೂರು : ಲೇಖಕಿ ಹಾಗೂ ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಅವರಿಗೆ ಕೊಲೆ ಬೆದರಿಕೆ ಪತ್ರ ಬಂದಿದೆ.
ಕೊಲೆ ಬೆದರಿಕೆ ಲಿಸ್ಟ್ನಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಹೆಚ್.ಡಿ.ಕುಮಾರಸ್ವಾಮಿ ಅವರ ಹೆಸರೂ ಇದೆ.
ಸಂಜಯನಗರದಲ್ಲಿರುವ ಲಲಿತಾ ನಾಯಕ್ ಅವರ ನಿವಾಸದ ವಿಳಾಸಕ್ಕೆ ಕಿಡಿಗೇಡಿಗಳು ಪತ್ರ ಬರೆದಿದ್ದಾರೆ. ಕೊಲೆ ಬೆದರಿಕೆ ಪತ್ರದಲ್ಲಿ ಮಾಜಿ ಸಿಎಂಗಳ ಜೊತೆಗೆ ಕೆಲವರು ಸಾಹಿತಿಗಳ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಂಜಯನಗರ ಪೊಲೀಸರಿಗೆ ಲಲಿತಾ ನಾಯಕ್ ಅವರು ದೂರು ನೀಡದ್ದಾರೆ.
ಪಿಎಫ್ಐ , ಸಿಎಫ್ಐ, ಎಸ್ಡಿಪಿಐ ಪರ ಮಾತಾಡಬಾರದು. ಅವರ ಸಭೆ-ಸಮಾರಂಭಗಳಲ್ಲಿ ಭಾಗಿವಹಿಸಬಾರದು. ಪಠ್ಯದಲ್ಲಿ ದೇಶಪ್ರೇಮ, ದೇಶ ಭಕ್ತಿ, ದೇಶ ರಕ್ಷಣೆ ಪಾಠ ಸೇರಿಸಿದ್ದಕ್ಕೆ ನಿಮಗೆಲ್ಲಾ ಭಯ. ನೀವು ನಿಜವಾದ ದೇಶದ್ರೋಹಿಗಳು.
ನಮ್ಮ ದೇಶವನ್ನು ನಾಶ ಮಾಡಲು ಹೊಂಚು ಹಾಕುತ್ತಿದ್ದೀರಾ? ಭಯೋತ್ಪಾದಕರು, ನಕ್ಸಲೈಟ್ಗಳು, ಮಾವೋವಾದಿಗಳು, ದೇಶದ್ರೋಹಿ ಮುಸ್ಲಿಂಮರಿಗೆ ಬೆಂಬಲವಾಗಿ ನಿಂತಿದ್ದೀರಿ. ಪಿಎಫ್ಐ ಕಾರ್ಯಕ್ರಮದಲ್ಲಿ ನಮ್ಮ ವೀರ ಸೈನಿಕರ ಬಗ್ಗೆ ಅಗೌರವವಾಗಿ ಮಾತನಾಡಿದ್ದೀರಿ? ನೀವು ಕ್ಷಮೆ ಕೇಳಬೇಕು. ನೀವು ಎಚ್ಚರಿಕೆಯಿಂದ ಇರೀ ಎಂದು ಪತ್ರದಲ್ಲಿ ಬರೆಯಲಾಗಿದೆ.