Publish Date: Sat, 10 Jun 2023 (19:56 IST)
Updated Date: Sat, 10 Jun 2023 (18:58 IST)
ಎನ್ಸಿಪಿ ಅಧ್ಯಕ್ಷ ಶರದ್ ಪವಾರ್‌ಗೆ ವಾಟ್ಸಪ್ ಸಂದೇಶದ ಮೂಲಕ ಕೊಲೆ ಬೆದರಿಕೆ ಕಿಡಿಗೇಡಿಗಳು ಬೆದರಿಕೆ ಹಾಕಿದ್ದಾರೆ.. ಇನ್ನು ಈ ಪ್ರಕರಣದಲ್ಲಿ ಸುಪ್ರಿಯಾ ಸುಳೆ ಮುಂಬೈ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ದೂರು ದಾಖಲಿಸಿದ್ದಾರೆ. ಶರದ್ ಪವಾರ್ ಅವರಿಗೆ ಯಾವುದೇ ರೀತಿಯ ತೊಂದರೆಯಾದರೆ ಅದಕ್ಕೆ ಗೃಹ ಸಚಿವಾಲಯವೇ ಹೊಣೆಯಾಗಲಿದೆ ಎಂದು ಸುಪ್ರಿಯಾ ಹೇಳಿದ್ದಾರೆ. ಮುಂಬೈ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿದ ನಂತರ ಶರದ್ ಪವಾರ್ ಅವರ ಪುತ್ರಿ ಮತ್ತು ಬಾರಾಮತಿ ಸಂಸದೆ ಸುಪ್ರಿಯಾ ಅವರು, ಶರದ್ ಪವಾರ್‌ಗೆ ವಾಟ್ಸಾಪ್‌ನಲ್ಲಿ ಬೆದರಿಕೆಗಳು ಬಂದಿವೆ. ಇಂತಹ ರಾಜಕಾರಣ ನಿಲ್ಲಬೇಕು. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಈ ವಿಷಯದಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.