Publish Date: Wed, 20 Feb 2019 (15:57 IST)
Updated Date: Wed, 20 Feb 2019 (15:59 IST)
ಜಾತ್ರೆಯಲ್ಲಿ ಗಾಳಿಯಲ್ಲಿ ಹಾರಿಸಿದ ಗುಂಡು ವ್ಯಕ್ತಿಗೆ ತಗುಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಢವಳೇಶ್ವರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಿಜಗುಣ ಅಂಗಡಿ ಮೃತ ದುರ್ದೈವಿಯಾಗಿದ್ದಾರೆ.
ಮಹದೇವ ನಾಡಗೌಡ ಬಂದೂಕಿನಿಂದ ಗುಂಡು ಹಾರಿಸಿದ ಆರೋಪಿಯಾಗಿದ್ದಾರೆ. ರಂಗೇಶ್ವರ ಜಾತ್ರೆಯಲ್ಲಿ ನಡೆದ ಅವಘಡ ಇದಾಗಿದೆ. ಜಾತ್ರೆ ಸಂದರ್ಭದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸುವಾಗ ಘಟನೆ ನಡೆದಿದೆ. ಐದು ಸುತ್ತು ಗುಂಡು ಹಾರಿಸುವಾಗ ಆಕಸ್ಮಿಕವಾಗಿ ತಗುಲಿದ ಗುಂಡಿನಿಂದ ನಿಜಗುಣ ಸಾವನ್ನಪ್ಪಿದ್ದಾರೆ.
ಈ ಕುರಿತು ಕುಲಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.