Select Your Language

Notifications

webdunia
webdunia
webdunia
webdunia

ಧಾರಾಕಾರ ಮಳೆಗೆ ದೇವರನಾಡು ತತ್ತರ: ಸಾವಿನ ಸಂಖ್ಯೆ 35ಕ್ಕೇರಿಕೆ

ಧಾರಾಕಾರ ಮಳೆಗೆ ದೇವರನಾಡು ತತ್ತರ: ಸಾವಿನ ಸಂಖ್ಯೆ 35ಕ್ಕೇರಿಕೆ
bangalore , ಮಂಗಳವಾರ, 19 ಅಕ್ಟೋಬರ್ 2021 (21:27 IST)
ದೇವರ ನಾಡು ಕೇರಳ ಭಾರೀ ಮಳೆಗೆ ತತ್ತರಿಸಿದ್ದು, ಪ್ರವಾಹ, ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ.
ಬಹುತೇಕ ಜಲಾಶಯಗಳು ಭರ್ತಿಯಾಗಿದ್ದು, ಕ್ರಸ್ಟ್‌ಗೇಟ್‌ಗಳನ್ನು ತೆರೆದು ನೀರು ಬಿಡಬೇಕಾದ ಅನಿವಾರ್ಯತೆ ಎದುರಾಗಿದೆ. ಇದರಿಂದ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಜನರು ಮತ್ತಷ್ಟು ಸಂಕಷ್ಟ ಎದುರಿಸಲಿದ್ದಾರೆ.
ನಾಲ್ಕು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಇನ್ನೂ ಮೂರು ದಿನ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.ಮಳೆ ಕಡಿಮೆಯಾಗುವವರೆಗೂ ಕಟ್ಟೆಚ್ಚರ ವಹಿಸಬೇಕು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅನಾಥ ಮಕ್ಕಳ ಆಶ್ರಮದಲ್ಲಿ ಇನ್ಮುಂದೆ ಅದ್ಧೂರಿ ಹುಟ್ಟುಹಬ್ಬ ಆಚರಿಸುವಂತಿಲ್ಲ