Daily Horoscope

Select Your Language

Notifications

webdunia
webdunia
webdunia
webdunia

Bengaluru: ಫುಟ್‌ಪಾತ್‌ನಲ್ಲೇ ಸಾವಿನ ದೃಶ್ಯ: ಟ್ರಾನ್ಸ್‌ಫಾರ್ಮರ್ ಬ್ಲಾಸ್ಟ್, ತೀವ್ರ ಸುಟ್ಟ ಗಾಯಗಳೊಂದಿಗೆ ಪಾರಾದ ಪಾದಚಾರಿ video

Bengaluru Transformer Blast
ಬೆಂಗಳೂರಿನ ಬಾಗಲೂರು ಮುಖ್ಯರಸ್ತೆಯಲ್ಲಿರುವ ಅಮೆಜಾನ್ ಆಫೀಸ್ ಮುಂಭಾಗದ ಕಾಲುದಾರಿಯಲ್ಲಿ ಅಳವಡಿಸಲಾಗಿದ್ದ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಬಾಕ್ಸ್ ಇದ್ದಕ್ಕಿದ್ದಂತೆ ಭಾರಿ ಶಬ್ದದೊಂದಿಗೆ ಸ್ಫೋಟಗೊಂಡಿದೆ. ಪಾದಚಾರಿ ಮಾರ್ಗದಲ್ಲಿ ನಡೆದುಹೋಗುತ್ತಿದ್ದ ಇಬ್ಬರು ಪಾದಚಾರಿಗಳು ಈ ದುರಂತದಲ್ಲಿ ಗಾಯಗೊಂಡಿದ್ದು, ಓರ್ವ ವ್ಯಕ್ತಿ ಕೆಳಗೆ ಬಿದ್ದು ಕೈಗಳಿಗೆ ತೀವ್ರ ಸ್ವರೂಪದ ಸುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಅದೇ ಹಾದಿಯಲ್ಲಿ ನಡೆದುಹೋಗುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
 
ಮಕ್ಕಳನ್ನು ಶಾಲೆಗೆ ಬಿಡಲು ಹೋಗುತ್ತಿದ್ದ ಅರುಣ್ ಜಿ ಎಂಬ ಪೋಷಕರ ಕ್ಯಾಮೆರಾದಲ್ಲಿ ಈ ಆಘಾತಕಾರಿ ದೃಶ್ಯ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಜನನಿಬಿಡ ಕಾಲುದಾರಿಗಳಲ್ಲಿ ಇಂತಹ ಅಪಾಯಕಾರಿ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳನ್ನು ಮುಕ್ತವಾಗಿ ಇಡಲು ಹೇಗೆ ಅನುಮತಿ ನೀಡಲಾಗುತ್ತದೆ? ಪ್ರತಿದಿನ ಸಾವಿರಾರು ಸಾರ್ವಜನಿಕರು, ಶಾಲಾ ಮಕ್ಕಳು, ಗರ್ಭಿಣಿಯರು ಹಾಗೂ ವಿಕಲಚೇತನರು ಓಡಾಡುವ ದಾರಿಯಲ್ಲಿ ಜೀವದ ಜೊತೆ ಚೆಲ್ಲಾಟವಾಡುವ ಬೆಸ್ಕಾಂ ಮತ್ತು ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹೊಣೆ ಯಾರು? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.
 
ಹಿಂದೆಯೂ ಬೆಂಗಳೂರಿನಲ್ಲಿ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡು ತಂದೆ-ಮಗಳು ಜೀವಂತವಾಗಿ ಬೆಂಕಿಗಾಹುತಿಯಾಗಿದ್ದ ಘಟನೆ ನಡೆದಿತ್ತು. ಇಷ್ಟೆಲ್ಲಾ ದುರಂತಗಳು ಸಂಭವಿಸಿದರೂ ಅಧಿಕಾರಿಗಳು ಮಾತ್ರ ಯಾವುದೇ ಪಾಠ ಕಲಿತಂತಿಲ್ಲ. ಕಾಲುದಾರಿಗಳು ಪಾದಚಾರಿಗಳ ಸುರಕ್ಷಿತ ಸಂಚಾರಕ್ಕೋ ಅಥವಾ ಮೃತ್ಯುಕೂಪಗಳಾಗಿಸಲೋ ಎಂಬ ಸಾಲು ಸಾಲು ಪ್ರಶ್ನೆಗಳು ನಾಗರಿಕರಿಂದ ವ್ಯಕ್ತವಾಗುತ್ತಿವೆ. ನಾಗರಿಕರ ಜೀವಕ್ಕೆ ಕನಿಷ್ಠ ಬೆಲೆಯನ್ನೂ ನೀಡದ ಇಲಾಖೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ತಕ್ಷಣವೇ ಕಾಲುದಾರಿಗಳಲ್ಲಿರುವ ಅಪಾಯಕಾರಿ ಟ್ರಾನ್ಸ್‌ಫಾರ್ಮರ್‌ಗಳನ್ನು ತೆರವುಗೊಳಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ