Webdunia - Bharat's app for daily news and videos

Install App

ಪ್ರತಿಯೊಬ್ಬ ಕನ್ನಡಿಗನ ಮೇಲೆ ₹1 ಲಕ್ಷ ಸಾಲದ ಹೊರೆ: ಇದು ಸಿದ್ದರಾಮಯ್ಯ ಸರ್ಕಾರದ ಸಾಧನೆ ಎಂದ ಬಿಜೆಪಿ

Sampriya
ಮಂಗಳವಾರ, 4 ಫೆಬ್ರವರಿ 2025 (18:04 IST)
Photo Courtesy X
ಬೆಂಗಳೂರು:  ಪ್ರಸ್ತುತ ಕರ್ನಾಟಕದ ಸಾಲ ₹6.65 ಲಕ್ಷ ಕೋಟಿಗೆ ತಲುಪಿದೆ. ಪ್ರತಿ ಕನ್ನಡಿಗನ ಮೇಲೆ ಬರೋಬ್ಬರಿ ₹1 ಲಕ್ಷ ಸಾಲದ ಹೊರೆಯನ್ನು ಭ್ರಷ್ಟ ಕಾಂಗ್ರೆಸ್‌ ಸರ್ಕಾರ ಹೊರಿಸಿದೆ ಎಂದು ಬಿಜೆಪಿ ಕಿಡಿಕಾರಿದೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ, ಕರ್ನಾಟಕವನ್ನು ಸಂಪೂರ್ಣ ದಿವಾಳಿ ಮಾಡಬೇಕೆಂಬುದೇ ಕಾಂಗ್ರೆಸ್‌ ಸರ್ಕಾರದ ಒನ್‌ ಲೈನ್‌ ಅಜೆಂಡಾವಾಗಿದೆ ಎಂದು ಅವರು ಕಿಡಿಕಾರಿದ್ದಾರೆ.

ಸಾಲ ಮಾಡುವುದನ್ನೇ ಫುಲ್‌ ಟೈಂ ಕಾಯಕವನ್ನಾಗಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಸ್ತುತ ಕರ್ನಾಟಕದ ಒಟ್ಟು ಸಾಲವನ್ನು ₹6 ಲಕ್ಷ 65 ಸಾವಿರ ಕೋಟಿಗೆ ಮುಟ್ಟಿಸಿದ್ದಾರೆ. ಪ್ರತಿ ಕನ್ನಡಿಗನ ಮೇಲೆ ಬರೋಬ್ಬರಿ ₹1 ಲಕ್ಷ ಸಾಲದ ಹೊರೆಯನ್ನು ಭ್ರಷ್ಟ ಕಾಂಗ್ರೆಸ್‌ ಸರ್ಕಾರ ಹೊರಿಸಿದೆ ಎಂದು ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ನಾವೀನ್ಯತೆಯ ಸೂಚ್ಯಂಕದಲ್ಲಿ, ಬಂಡವಾಳ ಹೂಡಿಕೆಯಲ್ಲಿ ನಂಬರ್‌ 1 ಆಗಿತ್ತು. ಆದರೆ, ಈಗಿನ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಅತಿ ಹೆಚ್ಚು ಸಾಲ ಮಾಡುವ ರಾಜ್ಯಗಳಲ್ಲಿ ನಂಬರ್‌ 1 ಆಗುತ್ತಿರುವುದು ಅತ್ಯಂತ ನಾಚಿಕೆಗೇಡು ಎಂದು ಅವರು ಟೀಕಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹೆಸರನ್ನು ಸಾಲರಾಮಯ್ಯ ಎಂದು ಬದಲಿಸಿಕೊಳ್ಳುವುದು ಒಳಿತು. ಅವರು ಸಿಎಂ ಆದಾಗೆಲ್ಲಾ ಕರ್ನಾಟಕದ ಸಾಲ ರಾಕೆಟ್‌ ವೇಗದಲ್ಲಿ ವೃದ್ಧಿಯಾಗುತ್ತಿದೆ. ಪ್ರಸ್ತುತ ಕರ್ನಾಟಕದ ಸಾಲ ₹6.65 ಲಕ್ಷ ಕೋಟಿಗೆ ತಲುಪಿದ್ದು, ಭ್ರಷ್ಟ ಕಾಂಗ್ರೆಸ್‌ ಸರ್ಕಾರದ ಆಡಳಿತ ಹೀಗೆಯೇ ಮುಂದುವರೆದರೆ ₹12 ಲಕ್ಷ ಕೋಟಿಗೆ ತಲುಪಿದರೂ ಅಚ್ಚರಿಯಿಲ್ಲ ಎಂದು ಕಿಡಿಕಾರಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments