Select Your Language

Notifications

webdunia
webdunia
webdunia
webdunia

ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ

Kaveri water
dehali , ಬುಧವಾರ, 20 ಸೆಪ್ಟಂಬರ್ 2023 (16:44 IST)
ಕಾವೇರಿ ನೀರು ವಿಚಾರವಾಗಿ ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ. ಸಭೆಯಲ್ಲಿ ಕರ್ನಾಟಕದಿಂದ ಸರ್ವ ಪಕ್ಷಗಳ ಸಂಸದರು, ಜನಪ್ರತಿನಿಧಿಗಳು ಭಾಗಿಯಾಗಿದ್ದರು. ಎಲ್ಲರೂ ಒಗ್ಗಟ್ಟು ಪ್ರದರ್ಶಿಸಲು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ದೆಹಲಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕಾವೇರಿ ಜಲ ವಿವಾದ ಸಂಬಂಧ ಕರ್ನಾಟಕದ ಮುಂದಿನ ಹೆಜ್ಜೆ ಕುರಿತು ತೀರ್ಮಾನಿಸಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಇಂದು ದೆಹಲಿಯಲ್ಲಿ ಸಭೆ ನಡೆಸಿದ್ರು. ಸರ್ವಪಕ್ಷಗಳ ನಾಯಕರು, ಕೇಂದ್ರ ಸಚಿವರು, ಸಂಸದರು, ಕಾವೇರಿ ಜಲಾನಯನ ಪ್ರದೇಶಗಳ ಶಾಸಕರು ಸಭೆಯಲ್ಲಿ ಭಾಗಿಯಾಗಿದ್ರು. ಸಭೆಯಲ್ಲಿ ಕಾವೇರಿ ನೀರು ವಿಚಾರವಾಗಿ ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ. ಸಭೆಯಲ್ಲಿ ರಾಜಕೀಯ ಮರೆತು ಎಲ್ಲರೂ ಒಗ್ಗಟ್ಟಾಗಿದ್ದೇವೆ. ಇಂದು ಸಂಜೆ 4 ಗಂಟೆಗೆ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಲು ಎಲ್ಲರೂ ಒಮ್ಮತದಿಂದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ನೀರಿಲ್ಲ ಅಂತಾ ನಿವೇದಿಸಿಕೊಂಡಿದ್ದೇವೆ-ಸಿಎಂ ಸಿದ್ದರಾಮಯ್ಯ