Publish Date: Fri, 08 Oct 2021 (21:15 IST)
Updated Date: Fri, 08 Oct 2021 (21:26 IST)
ಬೆಂಗಳೂರು: ಕಳೆದ ಸಾಲಿನಲ್ಲಿ ರಾಜ್ಯದ ಬೇರೆ ಬೇರೆ ವಿಶ್ವವಿದ್ಯಾಲಯಗಳಲ್ಲಿ ಕಾರ್ಯನಿರ್ವಹಿಸಿದ ಅತಿಥಿ ಉಪನ್ಯಾಸಕರ ಸೇವೆಯನ್ನು 2021-22ನೇ ಸಾಲಿಗೂ ಮುಂದುವರಿಸಲು ಆದೇಶಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಆಶ್ವತ್ಥನಾರಾಯಣ ಶುಕ್ರವಾರ ತಿಳಿಸಿದ್ದಾರೆ.
ಕಳೆದ ಸಾಲಿನಲ್ಲಿ ಅತಿಥಿ ಉಪನ್ಯಾಸಕರಾಗಿದ್ದವರನ್ನು ಒಂದು ದಿನದ ಮಟ್ಟಿಗೆ ಸೇವೆಯಿಂದ ಬಿಡುಗಡೆಗೊಳಿಸಿ ಪುನಃ ಸೇವೆಗೆ ಸೇರಿಸಿಕೊಳ್ಳಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.
ಕೋವಿಡ್ ವಿಷಮ ಪರಿಸ್ಥಿತಿಯನ್ನು ಪರಿಗಣನೆಗೆ ತೆಗೆದುಕೊಂಡು ಸಾರ್ವಜನಿಕ ಹಾಗೂ ಶೈಕ್ಷಣಿಕ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅಶ್ವತ್ಥ ನಾರಾಯಣ ವಿವರಿಸಿದ್ದಾರೆ.