ಹೆಚ್ಚಿನ ಚಿಕಿತ್ಸೆಗಾಗಿ ಸಿದ್ದಗಂಗಾ ಶ್ರೀಗಳನ್ನು ಚೆನ್ನೈಗೆ ಶಿಫ್ಟ್ ಮಾಡಲು ನಿರ್ಧಾರ

ಶುಕ್ರವಾರ, 7 ಡಿಸೆಂಬರ್ 2018 (09:40 IST)
ಬೆಂಗಳೂರು : ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಪದೇ ಪದೇ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿರುವ ಹಿನ್ನಲೆಯಲ್ಲಿ ಇದೀಗ ಅವರನ್ನು ಚೆನ್ನೈನ ಪ್ರತಿಷ್ಠಿತ ರೇಲಾ ಇನ್‌ಸ್ಟಿಟ್ಯೂಟ್‌ ಆಯಂಡ್ ಮೆಡಿಕಲ್ ಸೆಂಟರ್‌ಗೆ ಕರೆದುಕೊಂಡು ಹೋಗಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ.


ಚೆನ್ನೈನ ಡಾ.ಎಲ್.ಎನ್.ಕುಮಾರ್ ಅವರು ವಿಶ್ವದಲ್ಲಿಯೇ ಅತ್ಯುತ್ತಮ ತಜ್ಞ ವೈದ್ಯರಾಗಿದ್ದು, ಅವರ ಬಳಿ ಶ್ರೀಗಳಿಗೆ ಚಿಕಿತ್ಸೆ ಕೊಡಿಸಲು ತಿರ್ಮಾನಿಸಿದ್ದಾರೆ. ಆದ ಕಾರಣ ಇಂದು ಶ್ರೀಗಳನ್ನು ಚನ್ನೈಗೆ ಕರೆದುಕೊಂಡ ಹೋಗಲು ನಿರ್ಧರಿಸಲಾಗಿದೆ.
ಇಂದು ಮಧ್ಯಾಹ್ನ ಅಥವಾ ಸಂಜೆಯೊಳಗೆ ಶ್ರೀಗಳನ್ನು ರಸ್ತೆ ಅಥಾವ ಹೆಲಿಕಾಪ್ಟರ‍್ ಮೂಲಕ ಚಿಕಿತ್ಸೆಗಾಗಿ ಚೆನ್ನೈಗೆ ಕರೆದುಕೊಂಡು ಹೋಗಲಾಗುವುದು ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಇಂದು ತೆಲಂಗಾಣ ಹಾಗೂ ರಾಜಸ್ಥಾನ ವಿಧಾನಸಭಾ ಕ್ಷೇತ್ರಗಳ ಚುನಾವಣೆ