ರಾಜ್ಯದಲ್ಲಿ ಉಪಚುನಾವಣೆ ದಿನಾಂಕ ಘೋಷಣೆ

Webdunia
ಮಂಗಳವಾರ, 28 ಸೆಪ್ಟಂಬರ್ 2021 (19:24 IST)
ಸಿಂದಗಿ ಮತ್ತು ಹಾನಗಲ್ ಕ್ಷೇತ್ರದ ಉಪ ಚುನಾವಣೆ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 30 ರಂದು ಎರಡು ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ನವಂಬರ್ 2 ರಂದು ಮತ ಎಣಿಕೆ ನಡೆಯಲಿದೆ.
 
ರಾಜ್ಯದಲ್ಲಿ ಉಪಚುನಾವಣೆ ದಿನಾಂಕ ಘೋಷಣೆ ಮಾಡಲಾಗಿದೆ.ಹಾನಗಲ್ ಕ್ಷೇತ್ರವನ್ನು ಬಿಜೆಪಿ ಶಾಸಕ ಸಿ.ಎಂ. ಉದಾಸಿ ಪ್ರತಿನಿಧಿಸುತ್ತಿದ್ದರು. ಸಿಂದಗಿ ಕ್ಷೇತ್ರವನ್ನು ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ ಪ್ರತಿನಿಧಿಸುತ್ತಿದ್ದರು. ಅವರ ನಿಧನದಿಂದ ತೆರವಾದ ಸ್ಥಾನಗಳಿಗೆ ಉಪಚುನಾವಣೆಯನ್ನು ಘೋಷಣೆ ಮಾಡಲಾಗಿದೆ.
 
ಹಾನಗಲ್ ಕ್ಷೇತ್ರವನ್ನು ಉಳಿಸಿಕೊಳ್ಳಲು ಆಡಳಿತ ಪಕ್ಷ ಬಿಜೆಪಿ ಕಾರ್ಯತಂತ್ರ ರೂಪಿಸಿದ್ದು, ಉದಾಸಿ ಅವರ ಪುತ್ರ ಸಂಸದರಾದ ಶಿವಕುಮಾರ ಉದಾಸಿ ಅವರನನ್ನು ಕಣಕ್ಕಿಳಿಸಲಿದೆ ಎನ್ನಲಾಗಿದೆ.
 
ಎಂ.ಸಿ. ಮನಗೂಳಿ ಅವರ ಪುತ್ರ ಅಶೋಕ್ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದು, ಬಹುತೇಕ ಅವರೇ ಅಭ್ಯರ್ಥಿಯಾಗಲಿದ್ದಾರೆ ಎನ್ನಲಾಗಿದೆ. ಈ ಕ್ಷೇತ್ರವನ್ನು ಉಳಿಸಿಕೊಳ್ಳಲು ಜೆಡಿಎಸ್ ಕಾರ್ಯತಂತ್ರ ರೂಪಿಸಿದೆ. ಇವರೆಡೂ ಕ್ಷೇತ್ರಗಳಲ್ಲಿ ಮೂರು ಪಕ್ಷಗಳ ನಡುವೆ ತೀವ್ರ ಪೈಪೋಟಿ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯಗೆ ಏಕಾಏಕಿ ಅನಾರೋಗ್ಯ: ನಿಜವಾಗಿ ಆಗಿದ್ದೇನು ಇಲ್ಲಿದೆ ವಿವರ

ಸದನದಲ್ಲಿ ಎಂದಿನ ಖದರ್ ಇಲ್ಲ, ಡಿಕೆ ಶಿವಕುಮಾರ್ ಲೆಕ್ಕಾಚಾರವೇ ಬೇರೆ

Karnataka Weather: ಇಂದು ಭಾರೀ ಕುಸಿತ ಕಾಣಲಿದೆ ತಾಪಮಾನ, ಎಚ್ಚರ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಮುಂದಿನ ಸುದ್ದಿ
Show comments