Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಮೂರನೇ ಗ್ಯಾರೆಂಟಿ ಘೋಷಣೆ

Declaration of the Third Guarantee by Congress
bangalore , ಶುಕ್ರವಾರ, 24 ಫೆಬ್ರವರಿ 2023 (19:35 IST)
ಕಾಂಗ್ರೆಸ್ ಮೂರನೇ ಗ್ಯಾರಂಟಿ ಘೋಷಣೆ ಮಾಡಿದ್ದು, ಪ್ರತಿ ತಿಂಗಳು ಒಬ್ಬ ವ್ಯಕ್ತಿಗೆ ಬಿಪಿಎಲ್ ಕಾರ್ಡ್ ನಲ್ಲಿ ಇರುವವರಿಗೆ 10 ಕೆಜಿ ಅಕ್ಕಿಯನ್ನು ನೀಡಲಾಗುವುದು ಎಂದು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಕೆಪಿಸಿಸಿ ಕಚೇರಿಯಲ್ಲಿ ಘೋಷಣೆ ಮಾಡಿದ್ರು.ಈ ಬಗ್ಗೆ ಕೆಪಿಸಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಮಾತನಾಡಿ ಜನರ ಹಸಿವು ನೀಗಿಸಲು ಪ್ರತಿ ತಿಂಗಳು ಬಿಪಿಎಲ್ ಕಾರ್ಡ ಹೊಂದಿರುವ ಕುಟುಂಬಕ್ಕೆ 10 ಕೆಜಿ ಅಕ್ಕಿ ಕೋಡಲು ನಿರ್ಧರಿಸಿದ್ದೇವೆ ಎಂದು ಹೇಳಿದರು.ಇನ್ನೂ ಸಿದ್ದರಾಮಯ್ಯ, ಎಂ ಬಿ ಪಾಟೀಲ್ ಮಾತನಾಡಿ ನಾವು ರಾಜ್ಯ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಜನ ನೀವು ಅಧಿಕಾರಕ್ಕೆ ಬಂದಾಗ ಇದನ್ನ ಹೆಚ್ಚಿಸಬೇಕು ಎಂದು ಒತ್ತಾಯಿಸಿದ್ದಾರೆ. ನಾವು ನಮ್ಮ ರಾಷ್ಟ್ರೀಯ ನಾಯಕರ ಜೊತೆ ಚರ್ಚಿಸಿದ್ದೇವೆ. ಹಸಿದವರಿಗೆ ಹೊಟ್ಟೆ ತುಂಬ ಊಟ ನೀಡಬೇಕೆಂಬ ತೀರ್ಮಾನ ಕೈಗೊಂಡು ಈ ನಿರ್ಧಾರ ಮಾಡಿದ್ದೇವೆ' ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ವಿರುದ್ಧ ಸಿದ್ದು ಕಿಡಿ