Select Your Language

Notifications

webdunia
webdunia
webdunia
webdunia

ಹಾಸನ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ಘೋಷಣೆ

ಹಾಸನ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ಘೋಷಣೆ
ಹಾಸನ , ಗುರುವಾರ, 2 ಸೆಪ್ಟಂಬರ್ 2021 (09:56 IST)
ಹಾಸನ (ಸೆ 02) :  ಕೋವಿಡ್ ಸೋಂಕು ಹರಡುವಿಕೆ ತಡೆಯಲು ಹಾಸನ ಜಿಲ್ಲಾಡಳಿತ ಎರಡು ವಾರಗಳ ಕಾಲ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಿ ಆದೇಶ ಹೊರಡಿಸಿದೆ. ಸೆಪ್ಟೆಂಬರ್ 3ರ ಶುಕ್ರವಾರ ರಾತ್ರಿ 9 ಗಂಟೆಯಿಂದ ವಾರಾಂತ್ಯದ ಕರ್ಫ್ಯೂ ಜಾರಿಗೆ ಬರಲಿದೆ.

ಹಾಸನ ಜಿಲ್ಲಾಧಿಕಾರಿ ಆರ್. ಗಿರೀಶ್ ಈ ಕುರಿತು ಆದೇಶವನ್ನು ಹೊರಡಿಸಿದ್ದಾರೆ. ಜಿಲ್ಲಾ ವ್ಯಾಪ್ತಿಯಲ್ಲಿ ಎರಡು ವಾರಗಳ ವಾರಾಂತ್ಯದ ಕರ್ಫ್ಯೂ ವಿಧಿಸುವುದು ಮತ್ತು ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿರುವುದು ಸೂಕ್ತ ಎಂದು ಮನಗಂಡು ಈ ಕುರಿತು ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
3/9/2021ರ ರಾತ್ರಿ 9 ಗಂಟೆಯಿಂದ 6/9/2021ರ ಬೆಳಗ್ಗೆ 5 ಗಂಟೆಯ ತನಕ ಮತ್ತು 10/9/2021ರ ರಾತ್ರಿ 9 ಗಂಟೆಯಿಂದ 13/9/2021ರ ಬೆಳಗ್ಗೆ 5 ಗಂಟೆಯ ತನಕ ಅಂದರೆ ಎರಡು ವಾರಗಳ ಕಾಲ ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಬುಧವಾರದ ಹೆಲ್ತ್ ಬುಲೆಟಿನ್ ಪ್ರಕಾರ ಹಾಸನ ಜಿಲ್ಲೆಯಲ್ಲಿ 81 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಸಕ್ರಿಯ ಪ್ರಕರಣಗಳ ಸಂಖ್ಯೆ 1063 ಆಗಿದೆ. ಇದುವರೆಗೂ ಜಿಲ್ಲೆಯಲ್ಲಿ 1227 ಜನರು ಮೃತಪಟ್ಟಿದ್ದಾರೆ. ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 109716 ಆಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ವಿಜಯಪುರದಲ್ಲಿ ಮತ್ತೆ ಮತ್ತೆ ಕೇಳಿಬರ್ತಿದೆ ಭೂಮಿಯೊಳಗಿಂದ ವಿಚಿತ್ರ ಶಬ್ದ