ಮಂಡ್ಯ: ಗಣೇಶ ವಿಸರ್ಜನೆ ವೇಳೆ ಇದೀಗ ಮದ್ದೂರು ಪಟ್ಟಣದಲ್ಲಿ ಘಟನೆ ಕಳೆದ ವರ್ಷ ನೆಲಮಂಗಲದಲ್ಲಿ ಸಂಭವಿಸಿತ್ತು. ಇದೀಗ ಅದೇ ರೀತಿಯ ಘಟನೆ ಮರುಕಳಿಸಿದೆ. ಇದಕ್ಕೆ ಕಾಂಗ್ರೆಸ್ ನಡವಳಿಕೆಯೇ ಕಾರಣ ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ನವದೆಹಲಿಯಲ್ಲಿ ಈ ಸಂಬಂಧ ಪ್ರತಿಕ್ರಿಯಿಸಿದ ಅವರು, ಕುವೆಂಪು ಅವರ ಶಾಂತಿಯ ತೋಟಕ್ಕೆ ಬೆಂಕಿ ಹಚ್ಚುವ ಕೆಲಸ ಆಗುತ್ತಿದೆ. ಕಾಂಗ್ರೆಸ್ ನಡವಳಿಕೆ, ಅವರ ಆಡಳಿತವೇ ಈ ಘಟನೆಗೆ ಕಾರಣ. ಹಿಂದೂಗಳು ಅಸಮಾಧಾನವಾಗುವ ರೀತಿ ಕಾಂಗ್ರೆಸ್ ಮಾಡುತ್ತಿದೆ. ನಾವು ರಾಜಕೀಯವಾಗಿ ಹೇಳುತ್ತಿಲ್ಲ. ರಾಜ್ಯದ ಹಲವೆಡೆ ಗಲಾಟೆಯಾಗಲು ಕಾಂಗ್ರೆಸ್ ಪಕ್ಷವೇ ಕಾರಣವಾಗಿದ್ದು, ಅದರ ಅವನತಿ ಆರಂಭವಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಹಿಂದೆ ಒಂದೆರಡು ಜಿಲ್ಲೆಯಲ್ಲಿ ಸಂಘರ್ಷ ಸೀಮಿತವಾಗಿತ್ತು. ಆದರೆ ಕಾಂಗ್ರೆಸ್ ಆಡಳಿತದಲ್ಲಿ ಇಡೀ ರಾಜ್ಯಕ್ಕೆ ವ್ಯಾಪಿಸಿದೆ. ಅವರ ಪ್ರತಿಭಟನೆ ನೋಡಿದರೆ ಕಾಂಗ್ರೆಸ್ ಪಕ್ಷದ ಅವನತಿ ಆರಂಭವಾಗಿದೆ ಎಂದರ್ಥ ಎಂದರು.
ಕಾಂಗ್ರೆಸ್ ಇದನ್ನು ಅರ್ಥ ಮಾಡಿಕೊಳ್ಳದಿದ್ದರೆ ಇದು ಸೆಲ್ಪ್ ಸುಸೈಡ್ ಆಗಲಿದೆ. ಎಸ್, ಡಿಸಿ ಜೊತೆಗೆ ಮಾತನಾಡಿದ್ದೇನೆ ಶಾಂತಿ ಕಾಪಾಡಲು ಕೋರಿದ್ದೇನೆ. ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿಯಾಗದಂತೆ, ಜೀವ ಹಾನಿಯಾಗದಂತೆ ಹೋರಾಟ ಮಾಡಬೇಕೆಂದರು.