ಕಳೆದ ಶೈಕ್ಷಣಿಕ ವರ್ಷದಲ್ಲಿ ದೇಶದ ಒಂದರಿಂದ 12ನೇ ತರಗತಿವರೆಗಿನ ಶಾಲಾ-ಕಾಲೇಜುಗಳಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದ್ದರೂ ಕರ್ನಾಟಕದಲ್ಲಿ ಮಾತ್ರ ದಾಖಲಾತಿ ಪ್ರಮಾಣ ಕುಸಿದಿದೆ. ಕರ್ನಾಟಕ ರಾಜ್ಯದಲ್ಲಿ ದಾಖಲಾತಿ ಪ್ರಮಾಣ ಈ ಅವಧಿಯಲ್ಲಿ ಶೇ.2.32ರಷ್ಟುಕುಸಿತವಾಗಿದೆ. ಆದರೆ, ಇದೇ ಅವಧಿಯಲ್ಲಿ ಖಾಸಗಿ ಶಾಲೆಗಳಿಗೆ ಹೋಲಿಸಿದಾಗ ಸರ್ಕಾರಿ ಶಾಲೆಗಳ ದಾಖಲಾತಿ ಪ್ರಮಾಣ ಶೇ.1.25ರಷ್ಟುಏರಿಕೆಯಾಗಿದೆ. ಇತ್ತೀಚೆಗೆ ಪ್ರಕಟವಾಗಿರುವ 2020-21ನೇ ಸಾಲಿನ ಯುಡೈಸ್+ ವರದಿಯಲ್ಲಿ ಈ ಅಂಶ ಬೆಳಕಿಗೆ ಬಂದಿದೆ.