ಹವಾಮಾನ ವೈಪರೀತ್ಯದಿಂದಾಗಿ ಸುರಿಯುತ್ತಿದ್ದ ಮಳೆ ಇಳಿಕೆಯಾಗಲಿದ್ದು, ರಾಜ್ಯಾದ್ಯಂತ ಚಳಿಯ ವಾತಾವರಣ ಕಂಡು ಬರಲಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹಲವೆಡೆ ಮೋಡ ಕವಿದ ವಾತಾವರಣವಿರಲಿದ್ದು, ಅಲ್ಲಲ್ಲಿ ತುಂತುರು ಮಳೆಯಾಗಲಿದೆ. ಹೌದು ಕಳೆದ ಕೆಲ ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಿತ್ತು. ಹವಾಮಾನ ವೈಪರೀತ್ಯ ಇದಕ್ಕೆ ಕಾರಣವಾಗಿತ್ತು. ಆದರೆ ಇಂದಿನಿಂದ ಮಳೆ ಪ್ರಮಾಣ ಕಡಿಮೆಯಾಗಲಿದ್ದು, ಚಳಿ ವಾತಾವರಣ ಏರಿಕೆಯಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಇನ್ನು ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕೆಲ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಅಲ್ಲದೇ ಕೆಲ ಭಾಗಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್, ಕಲಬುರಗಿ, ಬಾಗಲಕೋಟೆ ನಗರಗಳಲ್ಲಿ ಬಿಸಿಲಿನ ವಾತಾವರಣ ಹೆಚ್ಚಲಿದೆ. ಮುಂಜಾನೆ ಹಾಗೂ ರಾತ್ರಿ ಹೊತ್ತು ಚಳಿ ಏರಿಕೆಯಾಗಲಿದೆ. ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.