ಕಳೆದ 24 ಗಂಟೆಗಳ ಅವಧಿಯಲ್ಲಿ 104 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2,149ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.ಲಭ್ಯವಾದ ಮಾಹಿತಿ ಪ್ರಕಾರ, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,46,81,040ಕ್ಕೆ ಏರಿಕೆಯಾಗಿದೆ. ಈವರೆಗೆ 5,30,726 ಮಂದಿ ಸಾವಿಗೀಡಾಗಿದ್ದಾರೆ. ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.01ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.80ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ. ಇನ್ನು ದೇಶದಲ್ಲಿ ಈವರೆಗೆ 4,41,48,165 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ