ಚಿಕ್ಕಬಳ್ಳಾಪುರ : ಇಶಾ ಫೌಂಡೇಶನ್ ವತಿಯಿಂದ ರಾಜ್ಯದಲ್ಲೂ ಆದಿ ಯೋಗಿ ಶಿವನ ಪ್ರತಿಮೆ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು, ಮೊದಲ ಕಾರ್ಯಕ್ರಮವಾಗಿ ನಾಗಮಂಟಪ ಉದ್ಘಾಟನಾ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಾಕ್ಷಿಯಾದರು.
ಚಿಕ್ಕಬಳ್ಳಾಪುರ ತಾಲೂಕಿನ ಕೌರನಹಳ್ಳಿ ಲಿಂಗಶೆಟ್ಟಿಪುರ ಗ್ರಾಮಗಳ ನಂತರ ಜಾಲಾರಿ ನರಸಿಂಹ ಸ್ವಾಮಿ ದೇವಾಲಯದ ನರಸಿಂಹದೇವರಬೆಟ್ಟದ ತಪ್ಪಲಿನಲ್ಲಿ ಇಶಾ ಫೌಂಡೇಶನ್ ವತಿಯಿಂದ ತಮಿಳುನಾಡಿನ ಕೊಯಮತ್ತೂರಿನಲ್ಲಿರುವಂತೆ 112 ಅಡಿಯ ಆದಿಯೋಗಿ ಶಿವನ ಪ್ರತಿಮೆ ನಿರ್ಮಾಣ ಕಾರ್ಯ ಬಹುತೇಕ ಮುಕ್ತಾಯವಾಗಿದೆ.
ಅದಿಯೋಗಿ ಶಿವನ ಅವತಾರದ ಪ್ರತಿಮೆ ನಿರ್ಮಾಣದ ಕಾರ್ಯದ ಅಂಗವಾಗಿ ಇಶಾ ಫೌಂಡೇಶನ್ ವತಿಯಿಂದ ಮೊದಲ ಕಾರ್ಯಕ್ರಮವಾಗಿ ನಾಗಮಂಟಪ ಲೋಕಾರ್ಪಣೆ ಇಂದು ನೇರವೇರಿತು.