Select Your Language

Notifications

webdunia
webdunia
webdunia
webdunia

ಮಾಧ್ಯಮಗಳ ವಿರುದ್ಧ ಮಾನನಷ್ಟ ಮೊಕದ್ದಮೆ: ಡಿ.ಕೆ.ಸುರೇಶ್

ಮಾಧ್ಯಮಗಳ ವಿರುದ್ಧ ಮಾನನಷ್ಟ ಮೊಕದ್ದಮೆ: ಡಿ.ಕೆ.ಸುರೇಶ್
ಬೆಂಗಳೂರು , ಶುಕ್ರವಾರ, 4 ಆಗಸ್ಟ್ 2017 (13:04 IST)
ಸುಳ್ಳು ಸುದ್ದಿಗಳನ್ನು ಬಿತ್ತರಿಸುತ್ತಿರುವ ಮಾಧ್ಯಮಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.
 
ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ನಿವಾಸಗಳ ಮೇಲೆ ನಡೆದಿರುವ ಐಟಿ ದಾಳಿಯ ಬಗ್ಗೆ ಮಾಧ್ಯಮಗಳು ಆಧಾರವಿಲ್ಲದ ಸುದ್ದಿಗಳನ್ನು ಬಿತ್ತರಿಸುತ್ತಿವೆ. ಸುಳ್ಳು ಸುದ್ದಿಗಳನ್ನು ಪ್ರಕಟಿಸಿ ಸಚಿವರ ಮಾನಹಾನಿಗೆ ಪ್ರಯತ್ನಿಸುತ್ತಿವೆ. ಇಂತಹ ಮಾಧ್ಯಮಗಳ ಮೇಲೆ ಮಾನನಷ್ಟ ಮೊಕದ್ದಮೆ ಹೂಡುತ್ತೇವೆ ಎಂದು ತಿಳಿಸಿದ್ದಾರೆ.
 
ಆದಾಯ ತೆರಿಗೆ ಅಧಿಕಾರಿಗಳು ತಮ್ಮ ಮಹಜರನಲ್ಲಿ ಯಾವುದೇ ಹಣ, ಚಿನ್ನಾಭರಣ ವಶಪಡಿಸಿಕೊಂಡಿಲ್ಲ ಎಂದು ಲಿಖಿತ ಹೇಳಿಕೆ ನೀಡಿದ್ದರೂ ಮಾಧ್ಯಮಗಳು ಸುಳ್ಳು ಸುದ್ದಿಗಳನ್ನು ಬಿತ್ತರಿಸುತ್ತಿವೆ. ಸುಳ್ಳು ಸುದ್ದಿಗಳ ಪ್ರಕಟಿಸುವ ಹಿಂದೆ ಕೆಲವರ ಷಡ್ಯಂತ್ರವಿದೆ ಎಂದು ಹೇಳಿದ್ದಾರೆ.
 
ನಾವು ಯಾವುದೇ ಉದ್ಯಮವಾಗಲಿ ಅಥವಾ ಇನ್ನಾವುದೋ ಹೂಡಿಕೆಯಾಗಲಿ ಕಾನೂನುಬಾಹಿರ ಮಾಡಿಲ್ಲ. ಮುಂಬರುವ ದಿನಗಳಲ್ಲಿ ಸತ್ಯ ಸಂಗತಿ ಹೊರಬರಲಿದೆ ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಐಟಿ ರೇಡ್: ಅಣ್ಣನ ಭೇಟಿಗೆ ಬಂದ ತಮ್ಮನ ತಡೆದ ಭದ್ರತಾ ಸಿಬ್ಬಂದಿ