ಮಾಧ್ಯಮಗಳ ವಿರುದ್ಧ ಮಾನನಷ್ಟ ಮೊಕದ್ದಮೆ: ಡಿ.ಕೆ.ಸುರೇಶ್

Webdunia
ಶುಕ್ರವಾರ, 4 ಆಗಸ್ಟ್ 2017 (13:04 IST)
ಸುಳ್ಳು ಸುದ್ದಿಗಳನ್ನು ಬಿತ್ತರಿಸುತ್ತಿರುವ ಮಾಧ್ಯಮಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.
 
ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ನಿವಾಸಗಳ ಮೇಲೆ ನಡೆದಿರುವ ಐಟಿ ದಾಳಿಯ ಬಗ್ಗೆ ಮಾಧ್ಯಮಗಳು ಆಧಾರವಿಲ್ಲದ ಸುದ್ದಿಗಳನ್ನು ಬಿತ್ತರಿಸುತ್ತಿವೆ. ಸುಳ್ಳು ಸುದ್ದಿಗಳನ್ನು ಪ್ರಕಟಿಸಿ ಸಚಿವರ ಮಾನಹಾನಿಗೆ ಪ್ರಯತ್ನಿಸುತ್ತಿವೆ. ಇಂತಹ ಮಾಧ್ಯಮಗಳ ಮೇಲೆ ಮಾನನಷ್ಟ ಮೊಕದ್ದಮೆ ಹೂಡುತ್ತೇವೆ ಎಂದು ತಿಳಿಸಿದ್ದಾರೆ.
 
ಆದಾಯ ತೆರಿಗೆ ಅಧಿಕಾರಿಗಳು ತಮ್ಮ ಮಹಜರನಲ್ಲಿ ಯಾವುದೇ ಹಣ, ಚಿನ್ನಾಭರಣ ವಶಪಡಿಸಿಕೊಂಡಿಲ್ಲ ಎಂದು ಲಿಖಿತ ಹೇಳಿಕೆ ನೀಡಿದ್ದರೂ ಮಾಧ್ಯಮಗಳು ಸುಳ್ಳು ಸುದ್ದಿಗಳನ್ನು ಬಿತ್ತರಿಸುತ್ತಿವೆ. ಸುಳ್ಳು ಸುದ್ದಿಗಳ ಪ್ರಕಟಿಸುವ ಹಿಂದೆ ಕೆಲವರ ಷಡ್ಯಂತ್ರವಿದೆ ಎಂದು ಹೇಳಿದ್ದಾರೆ.
 
ನಾವು ಯಾವುದೇ ಉದ್ಯಮವಾಗಲಿ ಅಥವಾ ಇನ್ನಾವುದೋ ಹೂಡಿಕೆಯಾಗಲಿ ಕಾನೂನುಬಾಹಿರ ಮಾಡಿಲ್ಲ. ಮುಂಬರುವ ದಿನಗಳಲ್ಲಿ ಸತ್ಯ ಸಂಗತಿ ಹೊರಬರಲಿದೆ ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ನನ್ನ ಮೇಲೆ ಇಲ್ಲಸಲ್ಲದ ಆರೋಪವನ್ನು ಮಾಡಲಾಗಿದೆ, ಡೆತ್‌ನೋಟ್ ಬರೆದಿಟ್ಟು 8ನೇ ತರಗತಿ ಬಾಲಕಿ ಸಾವು

ಮುಂದಿನ ಸುದ್ದಿ
Show comments