ಆರ್ಎಸ್ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ರೋಷನ್ ಬೇಗ್ ವಿರುದ್ಧ ಕೊಲೆ ಆರೋಪ ಮಾಡಿದ್ದ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.
ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಸಚಿವ ರೋಷನ್ ಬೇಗ್, 2 ಕೋಟಿ ರೂಪಾಯಿ ಪರಿಹಾರ ಹಣ ಕೇಳಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಸಚಿವ ರೋಷನ್ ಬೇಗ್ ವಿರುದ್ಧ ಆಧಾರ ರಹಿತ ಆರೋಪ ಮಾಡಿರುವ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಸಿವಿಲ್ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಶಿವಾಜಿನಗರದಲ್ಲಿ ವೇಗವಾಗಿ ಬಿಜೆಪಿ ಪಕ್ಷವನ್ನು ಮತ್ತು ಆರೆಸ್ಸೆಸ್ ಸಂಘಟನೆಯನ್ನು ಸಂಘಟಿಸುತ್ತಿರುವದನ್ನು ಸಹಿಸದ ಸಚಿವ ರೋಷನ್ ಬೇಗ್ ಸುಪಾರಿ ಕೊಟ್ಟು ರುದ್ರೇಶ್ ಹತ್ಯೆ ಮಾಡಿಸಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಗಂಭೀರವಾಗಿ ಆರೋಪಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ