ಮಾನನಷ್ಟ ಮೊಕದ್ದಮೆ ಪ್ರಕರಣ, ರಾಹುಲ್‌ ಗಾಂಧಿಗೆ ಜಾಮೀನು ಮಂಜೂರು

sampriya
ಶುಕ್ರವಾರ, 7 ಜೂನ್ 2024 (12:49 IST)
Photo By X
ಬೆಂಗಳೂರು: ಕರ್ನಾಟಕ ಬಿಜೆಪಿ ಘಟಕ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಬೆಂಗಳೂರಿನ ವಿಶೇಷ ನ್ಯಾಯಾಲಯವು ಶುಕ್ರವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾಮೀನು ಮಂಜೂರು ಮಾಡಿದೆ.

ಕಾಂಗ್ರೆಸ್ ಮುಖಂಡ ಡಿಕೆ ಸುರೇಶ್ ಅವರ ಶ್ಯೂರಿಟಿ ಮೇರೆಗೆ ಜಾಮೀನು ಮಂಜೂರು ಮಾಡಲಾಗಿದೆ. ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಜುಲೈ 30 ಕ್ಕೆ ಮುಂದೂಡಿದೆ.

2023ರ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಸ್ಥಳೀಯ ಪತ್ರಿಕೆಗಳಲ್ಲಿನ ಜಾಹೀರಾತುಗಳು ಮತ್ತು ಕಾಂಗ್ರೆಸ್‌ನ ‘ಸುಳ್ಳು ಪ್ರಚಾರ’ ಬಿಜೆಪಿಯ ಇಮೇಜ್‌ಗೆ ಧಕ್ಕೆ ತಂದಿದೆ ಎಂದು ದೂರಿನಲ್ಲಿ ಬಿಜೆಪಿ ಆರೋಪಿಸಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ), ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಾಗಿದೆ.

ಇದಕ್ಕೂ ಮುನ್ನ ಜೂನ್ 1ರಂದು ವಿಚಾರಣೆಗೆ ಹಾಜರಾದ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರಿಗೆ ನ್ಯಾಯಾಲಯ ಜಾಮೀನು ನೀಡಿತ್ತು. ಶಿವಕುಮಾರ್ ಕರ್ನಾಟಕ ಬಿಜೆಪಿ ಘಟಕ ದಾಖಲಿಸಿರುವ ಮಾನನಷ್ಟ ಮೊಕದ್ದಮೆಯನ್ನು ‘ಬೋಗಸ್ ಕೇಸ್’ ಎಂದು ಕರೆದಿದ್ದಾರೆ.

ಬಿಜೆಪಿ ನನ್ನ ವಿರುದ್ಧ, ಸಿಎಂ ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ ವಿರುದ್ಧ ಸುಳ್ಳು, ಬೋಗಸ್ ಪ್ರಕರಣ ದಾಖಲಿಸಿದ್ದು, ಸಮನ್ಸ್ ಜಾರಿ ಮಾಡಲಾಗಿದೆ ಎಂದು ಎಎನ್‌ಐಗೆ ತಿಳಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಪಕ್ಷ ನಾಯಕರು ಮಾತನಾಡುವಾಗ ಅದನ್ನು ಕೇಳುವ ವ್ಯವಧಾನವೂ ಇಲ್ಲ: ಬಿವೈ ವಿಜಯೇಂದ್ರ

UNESCO ಪಟ್ಟಿಗೆ ಸೇರ್ಪಡೆಗೊಂಡ ದೀಪಾವಳಿ, ಸಂತಸ ಹಂಚಿಕೊಂಡ ಪ್ರಧಾನಿ ಮೋದಿ

ಉತ್ತರ ಕರ್ನಾಟಕದ ರೈತರಿಗೆ ಅನ್ಯಾಯ,ಶ್ವೇತಪತ್ರ ಬಿಡುಗಡೆ ಮಾಡಲಿ: ಆರ್‌.ಅಶೋಕ

ಮಮತಾ ಬ್ಯಾನರ್ಜಿ ತಲೆನೋವಾಗಲಿದೆ ಹುಮಾಯೂನ್ ಹೊಸ ನಡೆ

ಗೋವಾ ಪಬ್ ದುರಂತ: ಬೆಂಗಳೂರಿನ ಪಬ್‌ಗಳಲ್ಲಿ ಬಿಗಿಗೊಳಿಸಿದ ಸುರಕ್ಷತಾ ಕ್ರಮ

ಮುಂದಿನ ಸುದ್ದಿ
Show comments